
ಕೋಟ: ಶಿಕ್ಷಣ ಪಡೆಯುತ್ತಿರುವ ಮಕ್ಕಳನ್ನು ಮೊಬೈಲ್ ವ್ಯಾಮೂಹದಿಂದ ದೂರ ಇರಿಸಿ ಎಂದು ಪತ್ರಕರ್ತೆ ಅಕ್ಷತಾ ಗಿರೀಶ್ ಕರೆ ನೀಡಿದ್ದಾರೆ. ಶನಿವಾರ ಕೋಟದ ಹಂದಟ್ಟು ಹಾಲು ಡೈರಿ ಸಭಾಂಗಣದಲ್ಲಿ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಅರಿವು ನಿಮಗಿರಲಿ ನೆರವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಪ್ರಸ್ತುತ ಕಾಲದಲ್ಲಿ ಮಕ್ಕಳಿಗೆ ಮೌಲ್ಯಯುತ ಸಂಸ್ಕಾರ ನೀಡಿ,ಸಂಬoಧಗಳ ಬಗ್ಗೆ ಆರಂಭಿಕ ದಿನಗಳಲ್ಲೆ ನೀಡಿ , ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ವಹಿಸುವ ಅಗತ್ಯತೆಯನ್ನು ಒತ್ತಿ ಹೇಳಿದರು.
ಕಾರ್ಯಕ್ರಮವನ್ನು ಹಂದಟ್ಟು ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಜಾನಕಿ ಹಂದೆ ಉದ್ಘಾಟಿಸಿದರು.
ಕೆ.ಎಂ ಎಫ್ ಇದರ ವಿಸ್ತೀರ್ಣಾಧಿಕಾರಿ ಸರಸ್ವತಿ ಸಂಘದ ಚಟುವಟಿ ಹಾಗೂ ಕಾರ್ಯವೈಖರಿಯ ಕುರಿತು ಪ್ರಶಂಸಿದರು.
ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಕೆ.ಮನೋಹರ್ ಪೂಜಾರಿ,ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷೆ ರತ್ನಾ ಪೂಜಾರಿ ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿದರು. ಕಾರ್ಯಕ್ರಮವನ್ನು ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ ವಂದಿಸಿದರು.
Leave a Reply