Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಡುಪಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸ್ಪೋಟಕ ಹೇಳಿಕೆ…!!

ಉಡುಪಿ: ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ ಬಗ್ಗೆ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಆರೋಪಿಯನ್ನಾಗಿ ಮಾಡಲಾಗಿದೆ. ಸರಕಾರದ ಈ ವರದಿಯನ್ನು ನಾನು ವಿರೋಧಿಸುತ್ತೇನೆ. ಬೆಂಗಳೂರಿನಲ್ಲಿ ಸಕ್ರಿಯವಾಗಿರುವ ಸ್ಮಗ್ಲಿಂಗ್ ಮಾಫಿಯಾ ಇದರ ಹಿಂದಿದೆ. ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗುಂಪುಗಳ ಸಹಾಯ ಪಡೆದು ಕಾಲ್ತುಳಿತ ನಡೆದ ಸ್ಥಳದಲ್ಲಿ ಗೊಂದಲ ಸೃಷ್ಟಿಸಲಾಗಿದೆ ಎಂದು ಅನುಪಮಾ ಶೆಣೈ ಗಂಭೀರ ಆರೋಪ ಮಾಡಿದರು.
ಈ ಬಗ್ಗೆ ಮೆಜಿಸ್ಟರಿಯಲ್ ಎನ್ ಕ್ವಯರಿ ನಡೆಸುತ್ತಿರುವ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಗೆ ಪತ್ರ ಬರೆದಿದ್ದೇನೆ. ದಯಾನಂದ್ ಅವರು ಮುಂದೆ ಡಿಜಿಪಿ ಮತ್ತು ಐಜಿಪಿ ಆಗುವ ನೇಮಕವಾಗುವುದನ್ನು ತಡೆಯುವ ಉದ್ದೇಶ ಇದರಲ್ಲಿದೆ. ರಮ್ಯಾ ರಾವ್ ಸ್ಮಗ್ಲಿಂಗ್ ಪ್ರಕರಣ ಮೂಲಕ ರಾಮಚಂದ್ರ ರಾವ್ ಅವರಿಗೆ ಹಿನ್ನಡೆಯಾಗುವಂತೆ ಮಾಡಲಾಯಿತು.

ಈ ಬಗ್ಗೆ ಮೆಜಿಸ್ಟರಿಯಲ್ ಎನ್ ಕ್ವಯರಿ ನಡೆಸುತ್ತಿರುವ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಗೆ ಪತ್ರ ಬರೆದಿದ್ದೇನೆ. ದಯಾನಂದ್ ಅವರು ಮುಂದೆ ಡಿಜಿಪಿ ಮತ್ತು ಐಜಿಪಿ ಆಗುವ ನೇಮಕವಾಗುವುದನ್ನು ತಡೆಯುವ ಉದ್ದೇಶ ಇದರಲ್ಲಿದೆ. ರಮ್ಯಾ ರಾವ್ ಸ್ಮಗ್ಲಿಂಗ್ ಪ್ರಕರಣ ಮೂಲಕ ರಾಮಚಂದ್ರ ರಾವ್ ಅವರಿಗೆ ಹಿನ್ನಡೆಯಾಗುವಂತೆ ಮಾಡಲಾಯಿತು.

ಸಲೀಂ ಅವರ ನೇಮಕಾತಿಯನ್ನು ಅನುಪಮಾ ಪ್ರಶ್ನಿಸಿದರು. ಒಳಸಂಚುಗಳನ್ನು ರೂಪಿಸಿ ಸಲೀಂ ಅವರನ್ನು ನೇಮಿಸಲಾಗಿದೆ. ದಯಾನಂದ್ ಮುಂದಿನ ಸೀನಿಯಾರಿಟಿಯಲ್ಲಿ ಇದ್ದಾರೆ. ಅಲೋಕ್ ಕುಮಾರ್ ಅವರ ಮೇಲೆ ಈಗಾಗಲೇ ಆರೋಪ ಹೊರಿಸಿ ದೂರ ವಿರಿಸಲಾಗಿದೆ. ದಯಾನಂದ್ ಅವರನ್ನು ಸಸ್ಪೆಂಡ್ ಮಾಡಿದ್ದು ಸಲೀಂ ಎಂದು ಅನುಪಮಾ ಶೆಣೈ ಪೊಲೀಸ್ ಇಲಾಖೆಯ ರಾಜಕೀಯ ಬಹಿರಂಗಪಡಿಸಿದರು.

ಮೇಲ್ನೋಟಕ್ಕೆ ವಿರಾಟ್ ಕೊಹ್ಲಿಯನ್ನು ಆರೋಪಿಯನ್ನಾಗಿ ಮಾಡುವ ಹೊನ್ನಾರ ಕಂಡುಬರುತ್ತದೆ. ವಿರಾಟ್ ಕೊಹ್ಲಿ ಅವರ ಸಾಮಾಜಿಕ ಜಾಲತಾಣ ವಿಡಿಯೋ ನೋಡಿ ಜನ ಬಂದಿದ್ದಾರೆ ಎನ್ನಲಾಗುತ್ತಿದೆ. ವರದಿಯಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ. ಸಾಮಾಜಿಕ ಜಾಲತಾಣದ ವಿಡಿಯೋವನ್ನು ದೇಶವಿದೇಶಗಳಿಂದಲೂ ಲಕ್ಷಾಂತರ ಜನ ನೋಡುತ್ತಾರೆ. ಒಂದೇ ದಿನದಲ್ಲಿ ಜನ ವಿಮಾನ ಹತ್ತಿ ಬಂದು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರಾ?.

ವಿರಾಟ್ ಕೊಹ್ಲಿ ವಿಡಿಯೋ ನೋಡಿದವರೆಲ್ಲಾ ಕಾರ್ಯಕ್ರಮದ ಸ್ಥಳಕ್ಕೆ ಬಂದ ಬಗ್ಗೆ ಸಿದ್ದರಾಮಯ್ಯನವರಲ್ಲಿ ದಾಖಲೆ ಇದೆಯಾ?. ಕೂಡಲೇ ಸಿಎಂ ಸಿದ್ದರಾಮಯ್ಯ ವಿರಾಟ್ ಕೊಹ್ಲಿ ಅಭಿಮಾನಿಗಳ ಕ್ಷಮೆ ಕೇಳಬೇಕು. ಆರ್ಸಿಬಿ ಪರ ವಕೀಲರು ತಾನು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಬರೆದ ಪತ್ರವನ್ನು ಪರಿಶೀಲಿಸಬೇಕು ಎಂದು ವಿರಾಟ್ ಕೊಹ್ಲಿಯನ್ನು ರಕ್ಷಿಸಬೇಕು ಎಂದು ಅನುಪಮಾ ಶೆಣೈ ಹೇಳಿದರು.

Leave a Reply

Your email address will not be published. Required fields are marked *