Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಾಂಡೇಶ್ವರ- ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ಭಾಷಣ, ಪ್ರಬಂದ ,ದೇಶಭಕ್ತಿ ಗೀತೆ ಹಾಗೂ ಚಿತ್ರಕಲೆ ಸ್ಪರ್ಧೆ

ಕೋಟ: ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಪಾಂಡೇಶ್ವರ ಇಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ಭಾಷಣ, ಪ್ರಬಂದ ,ದೇಶಭಕ್ತಿ ಗೀತೆ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಹಮ್ಮಿಕೊಂಡಿತು.
ಪಾಂಡೇಶ್ವರ ಪಂಚಾಯತ್ ಉಪಾಧ್ಯಕ್ಷರಾದ ವೈ.ಬಿ ರಾಘವೇಂದ್ರ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪಂಚಾಯತ್ ಸದಸ್ಯರಾದ ಚಂದ್ರಮೋಹನ್ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿ ಮಕ್ಕಳು ಇಂತಹ ಕಾರ್ಯಕ್ರಮಗಳನ್ನು ಉಪಯೋಗಿಸಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಒಳ್ಳೆಯ ಅವಕಾಶ ಎಂದರಲ್ಲದೆ ಈ ದಿಸೆಯಲ್ಲಿ ಗ್ರಂಥಾಲಯಕ್ಕೆ ಬಂದು ಪುಸ್ತಕಗಳನ್ನು ಓದಿ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ತಿಳಿಸಿದರು.  ತೀರ್ಪುಗಾರರಾಗಿ ಜ್ಞಾನೇಶ್ವರಿ ಉಡುಪ ಹಾಗೂ ಶ್ರಾವ್ಯ ಉಪಸ್ಥಿತರಿದ್ದರು.

ಗ್ರಂಥಾಲಯ ಮೇಲ್ವಿಚಾರಕರಾದ ಜ್ಯೋತಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ ವಂದಿಸಿದರು. ರೋಟರಿ ಕ್ಲಬ್ ಬ್ರಹ್ಮಾವರ ಹಾಗೂ ಭಾಸ್ಕರ ಪೂಜಾರಿ ಪಾಂಡೇಶ್ವರ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿತು.ಸುಮಾರು 50 ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಪಾಂಡೇಶ್ವರ ಇಲ್ಲಿ ಸ್ವಾತಂತ್ರ್ಯ  ದಿನಾಚರಣೆ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮವನ್ನು ಪಾಂಡೇಶ್ವರ ಪಂಚಾಯತ್ ಉಪಾಧ್ಯಕ್ಷರಾದ ವೈ.ಬಿ ರಾಘವೇಂದ್ರ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಂಚಾಯತ್ ಸದಸ್ಯರಾದ ಚಂದ್ರಮೋಹನ್ ಪೂಜಾರಿ, ಜ್ಞಾನೇಶ್ವರಿ ಉಡುಪ ಹಾಗೂ ಶ್ರಾವ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *