
ಕೋಟ: ಅರಿವು ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಪಾಂಡೇಶ್ವರ ಇವರು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಸಮಾರಂಭ ಇತ್ತೀಚಿಗೆ ನಡೆಯಿತು.
ಪಾಂಡೇಶ್ವರ ಪಂಚಾಯತ್ ಅಧ್ಯಕ್ಷೆ ಸುಶೀಲ ಸದಾನಂದ ಪೂಜಾರಿ, ಉಪಾಧ್ಯಕ್ಷ ವೈ ಬಿ ರಾಘವೇಂದ್ರ ಹಾಗೂ ಪ್ರಾಯೋಜಕರಾದ ರೋಟರಿ ಕ್ಲಬ್ ಬ್ರಹ್ಮಾವರ ಅಧ್ಯಕ್ಷ ಸತೀಶ್ ಶೆಟ್ಟಿ, ಹಾಗೂ ಸ್ಥಳೀಯರಾದ ಭಾಸ್ಕರ ಪೂಜಾರಿ , ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪಾಂಡೇಶ್ವರ ಪಂಚಾಯತ್ ಕಾರ್ಯದರ್ಶಿ ವಿಜಯ ಭಂಡಾರಿ ಸ್ವಾಗತಿಸಿದರು.ಗ್ರಂಥಾಲಯ ಮೇಲ್ವಿಚಾರಕರಾದ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು .ಪಂಚಾಯತ್ ಸದಸ್ಯ ಚಂದ್ರಮೋಹನ್ ವಂದಿಸಿದರು.
ಪಾಂಡೇಶ್ವರ ಅರಿವು ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ ಜರಗಿತು. ಪಾಂಡೇಶ್ವರ ಪಂಚಾಯತ್ ಅಧ್ಯಕ್ಷೆ ಸುಶೀಲ ಸದಾನಂದ ಪೂಜಾರಿ, ಉಪಾಧ್ಯಕ್ಷ ವೈ ಬಿ ರಾಘವೇಂದ್ರ ಹಾಗೂ ಪ್ರಾಯೋಜಕರಾದ ರೋಟರಿ ಕ್ಲಬ್ ಬ್ರಹ್ಮಾವರ ಅಧ್ಯಕ್ಷ ಸತೀಶ್ ಶೆಟ್ಟಿ ಇದ್ದರು.
Leave a Reply