
ಕೋಟ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ, ಶಿಶು ಅಭಿವೃದ್ಧಿ ಯೋಜನೆ, ಬ್ರಹ್ಮಾವರ, ಗ್ರಾಮ ಪಂಚಾಯತ್ ಕೋಟ. ಅಂಗನವಾಡಿ ಕೇಂದ್ರ ರಾಮ್ ಪ್ರಸಾದ್ ಇವರ ಸಂಯುಕ್ತ ಆಶ್ರಯದಲ್ಲಿ ಮೋಷನ್ ಅಭಿಯಾನ – ಪೋಷಣ್ ಮಾಸಾಚರಣೆ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಣೂರು ಪ್ರಸ್ತುತಿಯಲ್ಲಿ ಮುದ್ದು ಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮ ಶನಿವಾರ ಮಣೂರು ಮಹಾಲಿಂಗೇಶ್ವರ ಸಭಾಭವನದಲ್ಲಿ ಜರಗಿತು.
ಕಾರ್ಯಕ್ರಮವನ್ನು ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣೂರು ಮಹಾಲಿಂಗೇಶ್ವರ ದೇಗುಲದ ಜೀರ್ಣೋದ್ಧಾರ ಸಮಿತಿಯ ವಿಷ್ಣಮೂರ್ತಿ ಮಯ್ಯ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಸ್ನೇಹಕೂಟ ಮಣೂರು ಸಂಚಾಲಕಿ ಭಾರತಿ ವಿ ಮಯ್ಯ , ಕೋಟ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಹರೀಶ್ಚಂದ್ರ ನಾಯಕ್, ಮಿಷನ್ ಶಕ್ತಿ ಜಿಲ್ಲಾ ಸಂಯೋಜಕಿ ಶಾರದ, ಪಂಚವರ್ಣ ಯುವಕ ಮಂಡಲದ ಉಪಾಧ್ಯಕ್ಷ ದಿನೇಶ್ ಆಚಾರ್, ತೀರ್ಪುಗಾರರಾಗಿ ನಮೃತಾ ಪ್ರಭು ಉಪಸ್ಥಿತರಿದ್ದರು.
ಶಿಶು ಅಭಿವೃದ್ಧಿ ಯೋಜನೆ, ಬ್ರಹ್ಮಾವರ ಮೇಲ್ವಿಚಾರಕಿ ಲಕ್ಷ್ಮಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಕಲ್ಮಾಡಿ ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮಿ ನಿರೂಪಿಸಿದರು. ಶ್ರೀರಾಮಪ್ರಸಾದ ಅಂಗನವಾಡಿ ಕಾರ್ಯಕರ್ತೆ ನಿರ್ಮಲ ಉರಾಳ ವಂದಿಸಿದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಣೂರು ಪ್ರಸ್ತುತಿಯಲ್ಲಿ ಮುದ್ದು ಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮವನ್ನು ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಉದ್ಘಾಟಿಸಿದರು. ಸ್ನೇಹಕೂಟ ಮಣೂರು ಸಂಚಾಲಕಿ ಭಾರತಿ ವಿ ಮಯ್ಯ ,ಕೋಟ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಹರೀಶ್ಚಂದ್ರ ನಾಯಕ್ ಇದ್ದರು.
Leave a Reply