
ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕುಂದಾಪುರದಲ್ಲಿ ನಡೆದ ಜಿಲ್ಲಾಮಟ್ಟದ 17ರ ವಯೋಮಾನದ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಶ್ರೀ ವಿದ್ಯೇಶ ವಿದ್ಯಾಮಾನ್ಯ ನೇಷನಲ್ ಆಂಗ್ಲ ಮಾಧ್ಯಮ ಶಾಲೆ ಹೇರಾಡಿ ಜಯಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ ಆಯಿತು. ಸಂಸ್ಥೆಯ ಅಧ್ಯಕ್ಷ ರಾದ ಶ್ರೀ ಶಾಂತರಾಮ್ ಶೆಟ್ಟಿ, ಸಂಚಾಲಕರಾದ ಶ್ರೀ ರಾಜರಾಮ ಶೆಟ್ಟಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಲಿಖಿತಾ ಕೊಠಾರಿ ಶುಭ ಹಾರೈಸಿದರು. ದೈಹಿಕ ಶಿಕ್ಷಕರಾದ ಶ್ರೀ ಸುರೇಶ ಶೆಟ್ಟಿ, ಶ್ರೀಮತಿ ಜ್ಯೋತಿ, ಶ್ರೀ ಕುಮಾರ್ ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕ -ಶಿಕ್ಷಕೇತರ ವೃ0ದ ಶುಭ ಹಾರೈಸಿದರು..
Leave a Reply