Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಶಾರದೋತ್ಸವ ಸಂಭ್ರಮ ಅರ್ಥಪೂರ್ಣ ಆಚರಣೆಯಾಗಲಿ – ಡಾ.ಕೆ.ಎಸ್ ಕಾರಂತ್

ಕೋಟ: ಹಬ್ಬಹರಿದಿನಗಳು ಜನರ ಧಾರ್ಮಿಕ ಭಾವನೆಗಳನ್ನು ಗಟ್ಟಿಗೊಳಿಸುವ ಆಚರಣೆಯಾಗಿದೆ ಅದರಂತೆ ಶಾರದೋತ್ಸವ  ಕಾರ್ಯಕ್ರಮಗಳು ಜನಮಾನಸದಲ್ಲಿ ನೆಲೆಯೂರಿ ಒಗ್ಗಟ್ಟು ಪ್ರದರ್ಶಿಸುವ ಸಂಭ್ರಮವಾಗಲಿ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್ ಕಾರಂತ್ ಹೇಳಿದರು.

ಗುರುವಾರ ಸಾಲಿಗ್ರಾಮ ದೇಗುಲದಲ್ಲಿ ಪಾಂಡೇಶ್ವರ ಶಾರದೋತ್ಸವ ಸಮಿತಿ ವತಿಯಿಂದ ನಡೆಸಲ್ಪಡುವ  ಇದರ 32ನೇ ವರ್ಷದ ಶಾರದೋತ್ಸವ ಸಂಭ್ರಮ ಇದರ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಧಾರ್ಮಿಕ ಆಚರಣೆಗಳು ಗ್ರಾಮದಲ್ಲಿ ಸಹಬಾಳ್ವೆ ಹಾಗೂ ಸಾಮರಸ್ಯ ಬೆಸೆಯುವ ಉತ್ಸವಗಳಾಗಿ ಮೂಡಿಬರಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿ  ಲಕ್ಷ್ಮಿನಾರಾಯಣ ತುಂಗ, ದೇಗುಲದ ಮ್ಯಾನೇಜರ್ ಗಣೇಶ್ ಭಟ್ಟ ಪಾಂಡೇಶ್ವರ, ಕೂಟಮಹಾಜಗತ್ತು ಅಂಗ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಹೊಳ್ಳ,  ಶಾರದೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಮೋಹನ್ ಪೂಜಾರಿ , ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್, ಸಮಿತಿಯ ಉಪಾಧ್ಯಕ್ಷ ದೇವದಾಸ್ ಸಾಲ್ಯಾನ್, ಪಿ ಬಾಲಕೃಷ್ಣ ಪೂಜಾರಿ, ನಾರಾಯಣ ವಿ.ಆಚಾರ್, ಚಂದ್ರಶೇಖರ ಮಯ್ಯ, ಲೀಲಾವತಿ ಗಂಗಾಧರ್, ಕೋಶಾಧಿಕಾರಿ ವಿಶ್ವನಾಥ ಆಚಾರ್, ಜತೆಕೋಶಾಧಿಕಾರಿ ಉಷಾ ಗಣೇಶ ಪೂಜಾರಿ, ಕಲಾಕಾರ್ಯದರ್ಶಿ ಶ್ರೀಶ ಆಚಾರ್, ನಿತೇಶ್ ಪಾಂಡೇಶ್ವರ, ಅಭಿಜಿತ್ ಪಾಂಡೇಶ್ವರ, ಆಶಾ ವಸಂತ್ ಪೂಜಾರಿ, ಸುರೇಶ್ ಪೂಜಾರಿ, ಮನೋಜ್ ಪೂಜಾರಿ ರವಿ ಪೂಜಾರಿ ಮಕ್ಕಿ, ಆನಂದ ಆಚಾರ್, ಗಣಪಯ್ಯ ಆಚಾರ್, ರಾಜು ಪಾಂಡೇಶ್ವರ ಮತ್ತಿತರರು ಉಪಸ್ಥಿತರಿದ್ದರು.

ಸಾಲಿಗ್ರಾಮ ದೇಗುಲದಲ್ಲಿ ಪಾಂಡೇಶ್ವರ ಶಾರದೋತ್ಸವ ಸಮಿತಿ ವತಿಯಿಂದ ನಡೆಸಲ್ಪಡುವ  ಇದರ 32ನೇ ವರ್ಷದ ಶಾರದೋತ್ಸವ ಸಂಭ್ರಮ ಇದರ ಆಮಂತ್ರಣ ಪತ್ರಿಕೆಯನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್ ಕಾರಂತ್ ಬಿಡುಗಡೆಗೊಳಿಸಿದರು. ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ತುಂಗ, ದೇಗುಲದ ಮ್ಯಾನೇಜರ್ ಗಣೇಶ್ ಭಟ್ಟ ಪಾಂಡೇಶ್ವರ, ಕೂಟಮಹಾಜಗತ್ತು ಅಂಗ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಹೊಳ್ಳ, ಶಾರದೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಮೋಹನ್ ಪೂಜಾರಿ ಇದ್ದರು.

Leave a Reply

Your email address will not be published. Required fields are marked *