
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಪಶು ಆಸ್ಪತ್ರೆ ಕೋಟದ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ಲಸಿಕೆಯನ್ನು ಉಚಿತವಾಗಿ ನೀಡುವ ಶಿಬಿರ ಅ.9ರಂದು ನಡೆಯಿತು.
ಕೋಟ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಸೂರಜ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ರೇಬಿಸ್ ರೋಗದ ಲಕ್ಷಣ , ತಡೆಗಟ್ಟುವಿಕೆ ಹಾಗೂ ಮುಂಜಾಗುರತೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಸತೀಶ್ ಕುಂದರ್ ಬಾರಿಕೆರೆ ಅವರು ಮಾತನಾಡಿ ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ಉಚಿತವಾಗಿ ರೇಬಿಸ್ ಲಸಿಕೆಯನ್ನು ತಮ್ಮ ಮನೆಯ ಸಾಕು ನಾಯಿಗಳಿಗೆ ನೀಡಬೇಕು. ರೇಬಿಸ್ ರೋಗದ ಬಗ್ಗೆ ಭಯ ಬೇಡ, ಎಚ್ಚರಿಕೆ ಇರಲಿ ಹಾಗೂ ಮುಂದಿನ ದಿನಗಳಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಕಾರ್ಯಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಸೀತಾ, ವಿದ್ಯಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ನಿಯೋಜಿತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ್ ಶೆಟ್ಟಿ , ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಪಶು ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಪಶು ಆಸ್ಪತ್ರೆ ಕೋಟದ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ಲಸಿಕಾ ಕಾರ್ಯಕ್ರಮಕ್ಕೆ ಕೋಟ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಸೂರಜ್ ಅವರು ಚಾಲನೆ ನೀಡಿದರು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಸತೀಶ್ ಕುಂದರ್ ಬಾರಿಕೆರೆ, ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಸೀತಾ, ವಿದ್ಯಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಇದ್ದರು.
Leave a Reply