
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ಆಶ್ರಯದಲ್ಲಿ ಶುಕ್ರವಾರ ಕಾರಂತ ಥೀಮ್ ಪಾರ್ಕಿನಲ್ಲಿ ಡಾ|| ಶಿವರಾಮ ಕಾರಂತರ 123ನೇ ಜನ್ಮದಿನೋತ್ಸವವನ್ನು ಆಚರಿಸಲಾಯಿತು.
ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಆನಂದ ಸಿ ಕುಂದರ್ ಕಾರಂತರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕಾರಂತರ ಜೀವನಾಸಕ್ತಿಯನ್ನು ಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ ಮತ್ತು ಅಗತ್ಯತೆ ಇದೆ. ಅವರ ಕೊಡುಗೆ, ಸಾಮಾಜಿಕ ಕಳಕಳಿ ಅವರ ಸಾಹಿತ್ಯದ ಸಾಧನೆ ನಮಗೆಲ್ಲರಿಗೂ ಮಾದರಿ ಎಂದು ನುಡಿದರು.
ಈ ಸಂದರ್ಭದಲ್ಲಿ ಕೋಟತಟ್ಟು ಪಂಚಾಯತ್ ಅಧ್ಯಕ್ಷರಾದ ಸತೀಶ ಕುಂದರ್ ಬಾರಿಕೆರೆ, ಪಿ. ಡಿ.ಒ ಸುಧಾಕರ ಶೆಟ್ಟಿ, ಉಪಾಧ್ಯಕ್ಷರಾದ ಸರಸ್ವತಿ,ಪಂಚಾಯತ್ ಸದಸ್ಯರು ಹಾಗೂ ಪ್ರತಿಷ್ಠಾನದ ಸದಸ್ಯರು ಉಪಸ್ಥಿತರಿದ್ದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ, ಪ್ರಾಸ್ತಾವಿಕ ಮಾತನ್ನಾಡಿದರು. ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಂದೂಡಿಕೆ ಕಾರಣಾoತರದಿoದ ಈ ಬಾರಿ ನಡೆಯಬೇಕಿದ್ದ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಪಂಚಾಯತ್ ಅಧ್ಯಕ್ಷರಾದ ಸತೀಶ್ ಕುಂದರ್ ಬಾರಿಕೆರೆ ಪ್ರಕಟಣೆಯಲ್ಲಿ ತಿಳಿಸಿದರು.
ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ಆಶ್ರಯದಲ್ಲಿ ಶುಕ್ರವಾರ ಕಾರಂತ ಥೀಮ್ ಪಾರ್ಕಿನಲ್ಲಿ ಡಾ|| ಶಿವರಾಮ ಕಾರಂತರ 123ನೇ ಜನ್ಮದಿನೋತ್ಸವವನ್ನು ಆಚರಿಸಲಾಯಿತು. ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಆನಂದ ಸಿ ಕುಂದರ್ , ಕೋಟತಟ್ಟು ಪಂಚಾಯತ್ ಅಧ್ಯಕ್ಷರಾದ ಸತೀಶ ಕುಂದರ್ ಬಾರಿಕೆರೆ, ಪಿ. ಡಿ.ಒ ಸುಧಾಕರ ಶೆಟ್ಟಿ ಇದ್ದರು.
Leave a Reply