
ಉಡುಪಿ: ಎಂಜಿಎಂ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗವು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ನಡೆಸುವ ತಾಂತ್ರಿಕ-ಸಾಂಸ್ಕೃತಿಕ ಉತ್ಸವ ‘ಪ್ರದೀಪ್ತ 2025-26’ ವನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ ದೀಪ ಬೆಳಗಿಸಿ, ಲೋಗೋವನ್ನು ಬಿಡುಗಡೆ ಮಾಡುವ ಮೂಲಕ ಉದ್ಘಾಟಿಸಿದರು. ಉಪ ಪ್ರಾಂಶುಪಾಲರಾದ ಡಾ. ಎಂ. ವಿಶ್ವನಾಥ್ ಪೈ ಮಾತನಾಡಿ, ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ ಇಂತಹ ಕಾರ್ಯಕ್ರಮಗಳ ಅಗತ್ಯವಿದೆ ಎಂದು ತಿಳಿಸಿದರು.
ಐಕ್ಯೂಎಸಿ ಸಂಯೋಜಕಿ ಪ್ರೊ. ಶೈಲಜಾ ಎಚ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ವೀರ ಐಡಾ ಪಿಂಟೊ, ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥೆ ಡಾ. ರೇಖಾ ಎನ್ ಚಂದ್ರ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಯೋಜಕಿ ಪ್ರೊ. ಪವಿತ್ರಾ ಕೆ, ಪ್ರದೀಪ್ತ ಕಾರ್ಯಕ್ರಮಗಳ ಒಳನೋಟಗಳನ್ನು ನೀಡಿದರು. ವಿದ್ಯಾರ್ಥಿ ಸಂಯೋಜಕರಾದ ಕಾರ್ತಿಕ್ ರಾವ್, ವಿದ್ಯಾರ್ಥಿಗಳಾದ ಸ್ವರ್ಣ, ಪ್ರಜ್ವಲ್, ವೈಷ್ಣವಿ ಮತ್ತು ಐಶ್ವರ್ಯ ಕಾರ್ಯಕ್ರಮವನ್ನು ನಿರ್ವಹಿಸಿದರು.
Leave a Reply