Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಮಾಜ ಸೇವಕ ಸತೀಶ್ ಪೂಜಾರಿಯವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ

ಕೋಟ: ಉಡುಪಿ ಜಿಲ್ಲೆಯ ಸಮಾಜಸೇವೆಯಲ್ಲಿ ತೊಡಗಿಕೊಂಡ ಜಯಕರ್ನಾಟಕ ಜಿಲ್ಲಾಧ್ಯಕ್ಷ ಸಾಲಿಗ್ರಾಮದ ಸತೀಶ್ ಪೂಜಾರಿಯವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಜಿಲ್ಲೆಯ ವಿವಿಧ ಸಂಘಟನೆಯ ಕಾರ್ಯಕ್ರಮಗಳ ಜೊತೆಯಲ್ಲಿ ಸಮಾಜಸೇವೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ತೊಡಗಿಸಿಕೊಂಡಿದ್ದು, ಕ್ರೀಡೆಗೆ ಪ್ರೋತ್ಸಾಹ ನೀಡುವುದರಜೊತೆಗೆ, ಅಸಕ್ತರಿಗೆ ವಸತಿ ಸೌಲಭ್ಯ, ಅಂಗವಿಕಲರಿಗೆ ವೀಲ್ಹ್ಚೇರ್ ವಿತರಣೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಸಂಘ ಸಂಸ್ಥೆಗಳಿಗೆ, ದೇವಸ್ಥಾನಗಳಿಗೆ ದೇಣಿಗೆ, ಅಸಕ್ತ ಮಹಿಳೆಯರಿಗೆ ಹೊಲಿಗೆಯಂತ್ರ, ಅನಾಥಾಶ್ರಮ ಹಾಗೂ ವೃದ್ದಾಶ್ರಮಗಳಿಗೆ ಆಹಾರ ವಿತರಣೆ ಹೀಗೆ ಹತ್ತು ಹಲವು ಸಮಾಜಮುಖಿ ಕಾರ್ಯಗಳನ್ನು ಇದುವರೆಗೆ ಕೈಗೊಂಡ ಸತೀಶ್ ಪೂಜಾರಿಯವರಿಗೆ ನ.1ರಂದು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಜಿಲ್ಲಾ ಉಸ್ತವಾರಿ ಸಚಿವೆ ಲಕ್ಷಿö್ಮ ಹೆಬ್ಬಾಳ್ಕರ್ ಪ್ರಶಸ್ತಿಯನ್ನಿತ್ತು ಗೌರವಿಸಿದರು.

Leave a Reply

Your email address will not be published. Required fields are marked *