ಕೋಟ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ , ಅಂಪಾರ್ ನಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2025 – 26 ಸ್ಪರ್ಧೆಯಲ್ಲಿ ಹಳ್ನಾಡಿನ ತುಳಸಿ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಒಟ್ಟು 19 ಬಹುಮಾನಗಳನ್ನು ಪಡೆದುಕೊಳ್ಳುವುದರ ಮೂಲಕ ವಿಶೇಷ ಸಾಧನೆಗೈದಿದ್ದಾರೆ.
1ರಿಂದ 4ನೇ ತರಗತಿಯ ಭಕ್ತಿಗೀತೆ ಸ್ಪರ್ಧೆಯಲ್ಲಿ ಯಜ್ಞಿತ್ ಪ್ರಥಮ ಸ್ಥಾನ, ಛದ್ಮವೇಷ ಸ್ಪರ್ಧೆಯಲ್ಲಿ ಆರವ್ ಪ್ರಥಮ ಸ್ಥಾನ, ಪ್ರೌಢಶಾಲಾ ವಿಭಾಗದ ಮಿಮಿಕ್ರಿ ಸ್ಪರ್ಧೆಯಲ್ಲಿ ಸುಶಾನ್ ಪ್ರಥಮ ಸ್ಥಾನ, ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಸಾಕ್ಷರ್ .ಆರ್. ಶೆಟ್ಟಿ. ಪ್ರಥಮ ಸ್ಥಾನ ವನ್ನು ಪಡೆದು ಕೊಳ್ಳುವುದರ ಮೂಲಕ ಒಟ್ಟು ನಾಲ್ಕು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ,ಸಹ ಶಿಕ್ಷಕರು ಹಾಗೂ ಭೋದಕೇತರ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.















Leave a Reply