Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಜಮಖಂಡಿ ಬಳಿ ಭೀಕರ ಅಪಘಾತ; ನಾಲ್ವರ ಸಾವು

ಬಾಗಲಕೋಟೆ: ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಮೃತಪಟ್ಟ ಯುವಕರನ್ನು ವಿಶ್ವನಾಥ್ (17), ಪ್ರವೀಣ್ (22), ಗಣೇಶ (20) ಹಾಗೂ ಪ್ರಜ್ವಲ್ (17) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸಿದ್ದಾಪುರ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ.

ಸಿದ್ದಾಪುರ ಬಳಿರುವ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುವ ಟ್ರ್ಯಾಕ್ಟರನ್ನು ಬಿಜಾಪುರ-ಬೆಳಗಾವಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಅತಿವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ಕೆಳಗಡೆ ಕಾರು ಸಿಲುಕಿದ್ದು, ಅದರಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಕೊನೆಯುಸಿರೆಳೆದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು, ಟ್ರ್ಯಾಕ್ಟರ್ ಕೆಳಗಡೆ ಸಿಲುಕಿಕೊಂಡಿದ್ದ ಕಾರಿನಲ್ಲಿದ್ದ ಮೃತದೇಹಗಳನ್ನು ಸ್ಥಳೀಯರ ಸಹಾಯದಿಂದ ಹೊರತೆಗೆದಿದ್ದಾರೆ. ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *