Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

NSS ಶಿಬಿರ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಕಲಿಸುತ್ತದೆ”- ಗುರುರಾಜ ಶೆಟ್ಟಿ ಗಂಟಿಹೊಳೆ

ಪ್ರಾಯೋಗಿಕವಾಗಿ ಜೀವನ ಶಿಕ್ಷಣವನ್ನು ತರಗತಿಯ ಕಲಿಕೆಯೊಂದಿಗೆ ತಿಳಿದುಕೊಳ್ಳಲು ರಾಷ್ಟೀಯ ಸೇವಾ ಯೋಜನೆ ಸಹಕಾರಿಯಾಗಿದೆ. NSS, NCC ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳೇ ಶಿಬಿರದ ಜವಾಬ್ದಾರಿಯನ್ನು ತೆಗೆದುಕೊಂಡು ಸಮರ್ಥವಾಗಿ ನಿಭಾಯಿಸುವ ಮೂಲಕ ನಾಯಕತ್ವ ಗುಣಗಳನ್ನು ಕಲಿತುಕೊಳ್ಳಬಹುದು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಹೇಳಿದರು.

ಅವರು ಶಂಕರನಾರಾಯಣ ಸಮೀಪದ ಕುಂಬಾರಮಕ್ಕಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡುತ್ತಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್ ಅವರ ಅಧ್ಯಕ್ಷತೆ ವಹಿಸಿದ್ದರು. ಶ್ರೀ ದತ್ತಾತ್ರೇಯ ಭಟ್, ಕುಂಬಾರಮಕ್ಕಿ ಶಿಬಿರಕ್ಕೆ ಶುಭ ಕೋರಿದರು. ಕುಂದಾಪುರದ ಭಂಡಾರಕರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ  ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀ ರಾಮಚಂದ್ರ ಆಚಾರಿ ತಮ್ಮ ದಿಕ್ಸೂಚಿ ಭಾಷಣದಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಶಿಬಿರದ ಮಹತ್ವವನ್ನು ತಿಳಿಸಿಕೊಟ್ಟರು.

ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀ ಸಚಿನ್ ಎಸ್. ಅವರು ಕಾರ್ಯಕ್ರಮವನ್ನು ನಿರೂಪಿಸಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ 1ರ ಯೋಜನಾಧಿಕಾರಿ ಶ್ರೀ ರಾಮಚಂದ್ರ ಜಿ ಎಸ್ ಅವರು ಪ್ರಸ್ತಾವನೆಗೈದು ಸ್ವಾಗತಿಸಿದರು ಹಾಗೂ ಘಟಕ 2ರ ಯೋಜನಾಧಿಕಾರಿ ಕು.ಪ್ರಜ್ಞಾ ವಂದಿಸಿದರು.

Leave a Reply

Your email address will not be published. Required fields are marked *