ಕೋಟ: ಕಲಿಕಾ ಹಬ್ಬಗಳು ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳ ಅನಾವರಣ ವೇದಿಕೆ ಕಲ್ಪಿಸಲಿದೆ ಎಂದು ಶಾಲಾಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಐರೋಡಿ ರಾಜಶೇಖರ್ ಹೆಬ್ಬಾರ್ ಅಭಿಪ್ರಾಯಪಟ್ಟರು.
ಶನಿವಾರ ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಬ್ರಹ್ಮಾವರ ವಲಯ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗಾರಕಟ್ಟೆ ಇವರ ಸಹಭಾಗಿತ್ವದಲ್ಲಿ 2025-26ನೇ ಸಾಲಿನ ಹಂಗಾರಕಟ್ಟೆ ಕ್ಲಸ್ಟರ್ ಮಟ್ಟದ ಎಫ್ ಎಸ್ ಎಲ್ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಪಠ್ಯದ ಜೊತೆಗೆ ಮಕ್ಕಳ ಮನೋಸ್ಥೆರ್ಯ ಹೆಚ್ಚಿಸಲು ಇಂತಹ ಕಾರ್ಯಕ್ರಮಗಳು ಪರಿಣಾಮಕಾರಿ ಎಂದರು.
ಕಾರ್ಯಕ್ರಮವನ್ನು ಐರೋಡಿ ಗ್ರಾಮಪಂಚಾಯತ್ ಉಪಾಧ್ಯಕ್ಷೆ ಗೀತಾ ಶೆಟ್ಟಿ ಉದ್ಘಾಟಿಸಿದರು. ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ರೇಖಾ ಉಡುಪ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಭರತ್ ಶೆಟ್ಟಿ, ಬ್ರಹ್ಮಾವರ ವಲಯ ಶಿಕ್ಷಣ ಸಂಯೋಜಕಿ ಅನ್ನಪೂರ್ಣೇಶ್ವರಿ, ಬಿ.ಆರ್ ಪಿ ಆಶಾಕಿರಣ,ಸಿಆರ್ ಪಿ ಪ್ರಣಿತಾ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಪ್ರಸಿಲ್ಲಾ ಸ್ವಾಗತಿಸಿದರು. ಕಾರ್ಯಕ್ರಮವನ್ನು ಗೋಳಿಬೆಟ್ಟು ಶಾಲಾ ಮುಖ್ಯ ಶಿಕ್ಷಕ ಮಹೇಶ್ ಮೊಗವೀರ ನಿರೂಪಿಸಿದರು. ಶಾಲಾ ವಿಜ್ಞಾನ ಶಿಕ್ಷಕಿ ವೀಣಾ ಶೆಟ್ಟಿ ವಂದಿದರು.
ಕಲಿಕಾ ಹಬ್ಬ ವಿಶೇಷ ಸಂತೋಷದಾಯಕ ಗಣಿತ, ಕಥೆ ಹೇಳುವುದು, ಗಟ್ಟಿ ಓದುವುದು, ನಾಟಕಾಭಿನಯ, ಪೋಷಕರೊಂದಿಗೆ ಸಂವಾದ, ವಿಶೇಷವಾಗಿ ಕಲಿಕಾ ಸೇಲ್ಫಿ ಕಾರ್ನರ್ ವ್ಯವಸ್ಥೆ ಗಮನ ಸೆಳೆಯಿತು.
ಸಮಗ್ರ ಶಿಕ್ಷಣ ಕರ್ನಾಟಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಬ್ರಹ್ಮಾವರ ವಲಯ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗಾರಕಟ್ಟೆ ಇವರ ಸಹಭಾಗಿತ್ವದಲ್ಲಿ 2025-26ನೇ ಸಾಲಿನ ಹಂಗಾರಕಟ್ಟೆ ಕ್ಲಸ್ಟರ್ ಮಟ್ಟದ ಎಫ್ ಎಸ್ ಎಲ್ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಐರೋಡಿ ಗ್ರಾಮಪಂಚಾಯತ್ ಉಪಾಧ್ಯಕ್ಷೆ ಗೀತಾ ಶೆಟ್ಟಿ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಭರತ್ ಶೆಟ್ಟಿ, ಬ್ರಹ್ಮಾವರ ವಲಯ ಶಿಕ್ಷಣ ಸಂಯೋಜಕಿ ಅನ್ನಪೂರ್ಣೇಶ್ವರಿ, ಬಿ.ಆರ್ ಪಿ ಆಶಾಕಿರಣ, ಸಿಆರ್ ಪಿ ಪ್ರಣಿತಾ ಶೆಟ್ಟಿ ಇದ್ದರು.














Leave a Reply