
ಕೋಟ: ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅಲ್ಲಲ್ಲಿ ತ್ಯಾಜ್ಯಗಳನ್ನು ಎಸೆಯುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೋಡಿ ಗ್ರಾಮ ಪಂಚಾಯತ್, ಕೋಟ ಸಹಕಾರಿ ವ್ಯವಸಾಯಕ ಸಂಘ ಇವರ ಸಹಕಾರದೊಂದಿಗೆ ಸಾರ್ವಜನಿಕರಿಗೆ ಎಚ್ಚರಿಕೆಯ ಸೂಚನಾ ಫಲಕವನ್ನು ಅಳವಡಿಸಿ, ಅನಾವರಣ ಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಕೋಡಿ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಭಾಕರ ಮೆಂಡನ್ , ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಪಂಚಾಯತ್, ಕೋಟ ಸಿ ಎ ಬ್ಯಾಂಕ್ ಅಧ್ಯಕ್ಷ ತಿಮ್ಮ ಪೂಜಾರಿ , ಮುಖ್ಯಕಾರ್ಯ ನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ , ಕೋಟ ಪಂಚಾಯತ್ ಸದಸ್ಯರಾದ ಗೀತಾ ಖಾರ್ವಿ, ಕೃಷ್ಣ ಪೂಜಾರಿ ಪಿ , ಸತೀಶ್ ಜಿ ಕುಂದರ್, ಸಂಜೀವಿನಿ ಸಂಘದ ಎಂಬಿಕೆ ಅನಿತಾ ಹಾಗೂ ಪದಾಧಿಕಾರಿಗಳು, ಸದಸ್ಯರು , ಕೃಷಿ ಸಖಿ ಶಾಂತಾ , ಎಸ್ ಎಲ್ ಆರ್ ಎಮ್ ಕಾರ್ಯಕರ್ತೆಯರು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
Leave a Reply