
ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟತಟ್ಟು ಪಡುಕೆರೆಯಲ್ಲಿ ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕೋಟ ಇವರ ಸಂಯುಕ್ತ ಆಶ್ರಯದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ 2023ರ ಅಂಗವಾಗಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ಕಾರ್ಯಗಾರವನ್ನು ಗುರುವಾರ ನಡೆಸಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್ ವಹಿಸಿದ್ದರು. ಕಾರ್ಯಕ್ರಮವನ್ನು ರೋಟರಿ ವಲಯ 2ರ ಸಹಾಯಕ ಗವರ್ನರ್ ಕೆ.ನರಸಿಂಹ ಪ್ರಭು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ದೇವಪ್ಪ ಪಟಗಾರ ಡೆಂಗ್ಯೂ ಕಾಯಿಲೆ ಮತ್ತು ಸೊಳ್ಳೆ ಮೂಲಕ ಹರಡುವ ಕಾಯಿಲೆಗಳ ಕುರಿತು ಹಾಗೂ ಸೊಳ್ಳೆ ನಿಯಂತ್ರಣ ಲಾರ್ವ ಹಾರಿ ಕಾರ್ಯಕ್ರಮಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು.
ಮುಖ್ಯ ಅತಿಥಿಗಳಾಗಿ ರೋಟರಿ ವಲಯ ಸೇನಾನಿ ಮಂಜುನಾಥ್ ಕಾಂಚನ್ , ಕಾರ್ಯದರ್ಶಿ ತಿಮ್ಮ ಪೂಜಾರಿ, ಎಸ್‍ಡಿಎಂಸಿ ಅಧ್ಯಕ್ಷ ಸುಲೈಮಾನ್, ಸಿಆರ್‍ಪಿ ಕವಿತ, ಶಾಲೆಯ ಮುಖ್ಯ ಶಿಕ್ಷಕಿ ಜಾನಕಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ಹರಿಶ್ಚಂದ್ರ ನಾಯಕ್ ಉಪಸ್ಥಿತರಿದ್ದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟತಟ್ಟು ಮುಖ್ಯ ಶಿಕ್ಷಕಿ ಜಾನಕಿ ಸ್ವಾಗತಿಸಿ, ಸಹ ಶಿಕ್ಷಕ ಗಣೇಶ ಕಾರ್ಯಕ್ರಮವನ್ನು ನಿರೂಪಿಸಿ, ಸಹ ಶಿಕ್ಷಕಿ ಸಂಗೀತ ಧನ್ಯವಾದ ಸಮರ್ಪಿಸಿದರು. ಈ ಮಾಹಿತಿ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಪೋಷಕರು ಸೇರಿ 150 ಜನ ಭಾಗವಹಿಸಿ ಯಶಸ್ವಿಗೊಳಿಸಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟತಟ್ಟು ಪಡುಕೆರೆಯಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ 2023ರ ಅಂಗವಾಗಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ಕಾರ್ಯಗಾರವನ್ನು ಗುರುವಾರ ನಡೆಸಲಾಯಿತು.
Leave a Reply