
ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಮತ್ತು ಭರವಸೆ ಬೆಳೆಸಿಕೊಂಡಾಗ ಸಮಾಜದ ವ್ಯಕ್ತಿಯಾಗಲು ಸಾಧ್ಯ :ಪ್ರಭಾಕರ ಪ್ರಭು
ವಿದ್ಯಾರ್ಥಿಗಳು ತಮ್ಮವಿದ್ಯಾರ್ಥಿ ಜೀವನದಲ್ಲಿ ಕಲಿಕೆಯ ಅಧ್ಯಯನ ಸಮಯದಲ್ಲಿ ವಿದ್ಯೆಯೊಂದಿಗೆ ನಾಯಕತ್ವ ಗುಣಗಳೊಂದಿಗೆ ನಿರ್ದಿಷ್ಟ ಗುರಿ ಮತ್ತು ಭರವಸೆ ಇಟ್ಟುಕೊಂಡರೆ ಒಟ್ಟು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯರು ಹಾಗೂ ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರಭಾಕರ ಪ್ರಭು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು ಇಂದು ಕಾಲೇಜ್ ಸಭಾಂಗಣದಲ್ಲಿ ನಡೆದ ಸರಕಾರಿ ಪದವಿ ಪೂರ್ವ ಸಿದ್ದಕಟ್ಟೆ ಇಲ್ಲಿನ 2023-24 ನೇ ಸಾಲಿನ ಕಾಲೇಜು ವಿದ್ಯಾರ್ಥಿ ಸಂಘ, ರಾಷ್ಟ್ರಿಯ ಸೇವಾ ಯೋಜನೆ ಘಟಕ. ರೋವರ್ ರೆಂಜರ್, ಯೂತ್ ರೆಡ್ ಕ್ರಾಸ್ ಮತ್ತು ಇಕೋ ಕ್ಲಬ್ ಅಂತರ ಸಂಘಗಳ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.
ಕಾರ್ಯಕ್ರಮ ಉದ್ಘಾಟನೆ ಮಾಡಿದ ಸಿದ್ದಕಟ್ಟೆ ಪ್ರಥಮ ದರ್ಜೆ ಕಾಲೇಜ್ ಪ್ರಾ0ಶುಪಾಲ ರಾದ ಡಾ. ಅಜಕ್ಕಳ ಗಿರೀಶ್ ಭಟ್ ಮಾತಾನಾಡಿ ವಿದ್ಯಾರ್ಥಿಗಳು ವಿದ್ಯಾರ್ಥಿ ಸಂಘದ ಮೂಲಕ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು ಹಾಗೂ ಜ್ಯಾನದ ಮುಲಾಕ ಆಧುನಿಕ ತಂತ್ರಜ್ಞಾನ ಜಗತ್ತಿನಲ್ಲಿ ನಮ್ಮ ತನವನ್ನು ಉಳಿಸಿಕೊಂಡು ದೀಪದ ಹಾಗೆ ಬೆಳಗಬೇಕು ಎಂದೂ ಶುಭ ಹಾರೈಸಿದರು.
ಆಧುನಿಕ ಕಾಲ ಘಟ್ಟದಲ್ಲಿ ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ಸಮಾಜದೊಂದಿಗೆ ಮತ್ತು ನೈಜ ವಿಷಯಗಳ ಬಗ್ಗೆ ಯಾವ ರೀತಿಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ವಿಷಯಾಧಾರಿತವಾಗಿ ಹೇಳಿದರು. ಕಾಲೇಜ್ ಪ್ರಾ೦ಶುಪಾಲರಾದ ಉದಯಕುಮಾರ್ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋದಿಸಿದರು.
ಸಭೆಯಲ್ಲಿಕಾಲೇಜ್ ಹಿರಿಯ ಉಪನ್ಯಾಸಕರಾದ ಶ್ರೀನಿವಾಸ ನಾಯ್ಕ್,ಕಾಲೇಜ್ ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಸಂಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಉದಯ ಪುಜಾರಿ, ಕಾಲೇಜ್ ಅಭಿವೃದ್ಧಿ ಸಮಿತಿ ಸದಸ್ಯರಾದ ಯೋಗೀಶ್ ಪೂಜಾರಿ ಕರ್ಪೆ ಸೇರಿದಂತೆ ಕಾಲೇಜ್ ಉಪನ್ಯಾಸಕರು ಉಪಸ್ಥಿತರಿದ್ದರು.
ಕಾಲೇಜ್ ಇತಿಹಾಸ ಉಪನ್ಯಾಸಕರಾದ ಮಮತಾ ಸ್ವಾಗತಿಸಿ,ಕನ್ನಡ ಉಪನ್ಯಾಸಕರಾದ ಸಂಜಯ್. ಬಿ. ಎಸ್. ಕಾರ್ಯಕ್ರಮ ನಿರೂಪಿಸಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶಿನಪ್ಪ ಎಂ ಧನ್ಯವಾದವಿತ್ತರು.
Leave a Reply