
ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಪ್ರಶಸ್ತಿ
ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘವು ಪ್ರಾರಂಭಗೊಂಡು 65 ವರ್ಷಗಳ ಸಾರ್ಥಕ ಸೇವೆಯನ್ನು ನೀಡಿ, 66ನೇ ವರ್ಷದಲ್ಲಿ ಯಶಪ್ರದವಾಗಿ ಮುನ್ನೆಡೆಯುತ್ತಿರುವ ಸಂದರ್ಭ ಸಂಘವು 206 ಕೋಟಿಗೂ ಮಿಕ್ಕಿ ಠೇವಣಾತಿ ಹೊಂದಿ, 162 ಕೋಟಿಗೂ ಮಿಕ್ಕಿ ಸಾಲ ನೀಡಿದ್ದು, 223 ಕೋಟಿಗೂ ಮಿಕ್ಕಿ ದುಡಿಯುವ ಬಂಡವಾಳದೊಂದಿಗೆ ಸತತ 13 ವರ್ಷಗಳಿಂದ ‘ಅ’ ತರಗತಿ ಆಡಿಟ್ ವರ್ಗೀಕರಣ, 2022-23ನೇ ಸಾಲಿನಲ್ಲಿ ಶೇ.98.08ರಷ್ಟು ಸಾಲ ವಸೂಲಾತಿಯೊಂದಿಗೆ 5.17 ಕೋಟಿ ಲಾಭವನ್ನು ಗಳಿಸಿ ಇನ್ನಿತರ ಸಹಕಾರಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿ ಸಂಘವು ಮುಂಚೂಣಿಯಲ್ಲಿದೆ.
2022-23ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಲಿ. ಮಂಗಳೂರು (ಸ್ಕ್ಯಾಡ್ಸ್) ಇವರಿಂದ ಸಂಘವು ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣ ಹಾಗೂ ಬಿಡಿಭಾಗಗಳನ್ನು ಖರೀದಿಸಿ ತನ್ನ ಸದಸ್ಯರಿಗೆ ವಿತರಿಸುವ ಮೂಲಕ ಪ್ರಥಮ ಸ್ಥಾನ ಗಳಿಸಿರುತ್ತದೆ.
ಈ ಹಿನ್ನಲ್ಲೆಯನ್ನು ಗಮನಿಸಿಕೊಂಡು ಜು.31ರಂದು ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು (ಸ್ಕ್ಯಾಡ್ಸ್) ಇದರ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ರವೀಂದ್ರ ಕಂಬಳಿ ಇವರು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಯವರಾದ ಶರತ ಕುಮಾರ್ ಶೆಟ್ಟಿ ಇವರಿಗೆ ಅಭಿನಂದನಾ ಪತ್ರ ಮತ್ತು ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು. ಸಂಘದ ನಿರ್ದೇಶಕರಾದ ಭಾಸ್ಕರ ಶೆಟ್ಟಿ ಈ ಸಂದರ್ಭ ಉಪಸ್ಥಿತರಿದ್ದರು.
ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಪ್ರಶಸ್ತಿ ನೀಡಿ ಗೌವರಿಸಿದೆ.














Leave a Reply