
ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬ್ರಹ್ಮಾವರ ತಾಲ್ಲೂಕು ಕೋಟವಲಯ , ಲಕ್ಷ್ಮಿಸೋಮ ಬಂಗೇರ ಸರ್ಕಾರಿ ಪಥಮದರ್ಜೆ ಕಾಲೇಜು ಮಣೂರು ಪಡುಕೆರೆಯಲ್ಲಿ ಜನಜಾಗೃತಿ ಕಾರ್ಯಕ್ರಮದಡಿಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಇತ್ತೀಚಿಗೆ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ತಾಲೂಕು ಜನಜಾಗ್ರತಿ ಅಧ್ಯಕ್ಷ ಅಚ್ಯುತ ಪೂಜಾರಿ ಕಾರ್ಕಡ ಉದ್ಘಾಟಿಸಿ ವಿದ್ಯಾರ್ಥಿ ಜೀವನದಲ್ಲಿ ದುಶ್ಚಟಗಳಿಗೆ ಬಲಿಯಾಗದಂತೆ ದೃಢ ನಿರ್ಧಾರ ಮಾಡಬೇಕು, ಆತ್ಮ ಗೌರವ, ಗುರಿ ಮತ್ತು ಕಠಿಣ ಪರಿಶ್ರಮವಿದ್ದಲ್ಲಿ ದುಶ್ಚಟಗಳಿಂದ ದೂರವಿರಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಕುಂದಾಪುರದ ಪ್ರಸಿದ್ಧ ಮನೋವೈದ್ಯ ಡಾ|| ಪ್ರಕಾಶ್ ಸಿ ತೋಳಾರ್ ಮಾಹಿತಿ ನೀಡಿ ಕೆಲವೊಂದು ದುಶ್ಚಟಗಳು ಸಾಮಾಜಿಕ ಆಚರಣೆಯಾಗಿ ಕಂಡು ಬರುತ್ತಿದೆ. ವಿದ್ಯಾರ್ಥಿಗಳು ಅನುಕರಣೆಯಿಂದ ಮತ್ತು ಕುತೂಹಲದಿಂದ, ಕೌಟುಂಬಿಕ ಸಮಸ್ಯೆಯಿಂದಾಗಿ ಮದ್ಯವ್ಯಸನಕ್ಕೆ ತುತ್ತಾಗುತ್ತಾರೆ. ಮಾದಕ ವಸ್ತುಗಳಿಂದ ಜನಜೀವನ ಯಾವ ರೀತಿ ಹಾಳಾಗುತ್ತಿದೆ. ದುಶ್ಚಟಗಳಿಂದ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯದ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದರ ಬಗ್ಗೆ ವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯೋಜನಾಧಿಕಾರಿಗಳಾದ ರಮೇಶ್ ಪಿ ಕೆ ವ್ಯಕ್ತಿ ದುಶ್ಚಟಕ್ಕೆ ಬಲಿಯಾದಾಗ ಸಾಮಾಜಿಕ ಮತ್ತು ಕೌಟುಂಬಿಕವಾಗಿ ಅಭಿವೃದ್ಧಿಯಾಗದಿರುವುದು ಕಂಡು ಬರುತ್ತಿದೆ. ಪೂಜ್ಯ ಡಾ. ವೀರೇಂದ್ರ ಹೆಗ್ಗಡೆಯವರು ಮುಂದಿನ ಜನಾಂಗದ ಯುವಕರು ದುಶ್ಚಟಕ್ಕೆ ಬಲಿಯಾಗಬಾರದು ಎಂಬ ಉದ್ದೇಶದಿಂದ ಶಾಲಾ ಕಾಲೇಜುಗಳಲ್ಲಿ ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮ ಪ್ರಾರಂಭಿಸಿದ್ದಾರೆ ಎಂದು ಹೇಳಿದರು ಮತ್ತು ವಿದ್ಯಾರ್ಥಿಗಳಿಗೆ ದುಶ್ಚಟಗಳಿಂದ ದೂರವಿರುವಂತೆ ಸಂಕಲ್ಪ ಮಾಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಡಾ. ಸುನಿತಾ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜನಜಾಗೃತಿ ಸದಸ್ಯ ಜಯರಾಮ್ ಶೆಟ್ಟಿ, ಕಾಲೇಜಿನ ಪ್ರಾಧ್ಯಾಪಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಲಯದ ಮೇಲ್ವಿಚಾರಕಿ ನೇತ್ರಾವತಿ ನಿರೂಪಿಸಿ, ಸೇವಾಪ್ರತಿನಿಧಿ ಗುಲಾಬಿ ದೇವದಾಸ್ ಸ್ವಾಗತಿಸಿ, ಶ್ರೀಲಕ್ಷ್ಮಿ ವಂದಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬ್ರಹ್ಮಾವರ ತಾಲ್ಲೂಕು ಕೋಟವಲಯ , ಲಕ್ಷ್ಮಿಸೋಮ ಬಂಗೇರ ಸರ್ಕಾರಿ ಪಥಮದರ್ಜೆ ಕಾಲೇಜು ಮಣೂರು ಪಡುಕೆರೆಯಲ್ಲಿ ಜನಜಾಗೃತಿ ಕಾರ್ಯಕ್ರಮದಡಿಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಕುಂದಾಪುರದ ಪ್ರಸಿದ್ಧ ಮನೋವೈದ್ಯ ಡಾ|| ಪ್ರಕಾಶ್ ಸಿ ತೋಳಾರ್ ಮಾಹಿತಿ ನೀಡಿದರು.














Leave a Reply