Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಇಂಟರ್ನ್ಯಾಷನಲ್ ಸ್ಪೋರ್ಟ್ಸ್ ಚಾಂಪಿಯನ್‍ಶಿಪ್‍ನ ಈಜು ಸ್ಪರ್ಧೆಯಲ್ಲಿ ಗೋಪಾಲ್ ಖಾರ್ವಿ ಚಿನ್ನದ ಪದಕ

ಕೋಟ: ಭೂತಾನ್‍ನಲ್ಲಿ ನಡೆದ ಸೌತ್ ಏಷ್ಯನ್ ಫೆಡರೇಷನ್ ಆಫ್ ಆಲ್ ಸ್ಪೋರ್ಟ್ಸ್ ಸಫಾಸ್ ಇವರು ಆಯೋಜಿಸಿದ ಇಂಟರ್ನ್ಯಾಷನಲ್ ಸ್ಪೋರ್ಟ್ಸ್ ಚಾಂಪಿಯನ್‍ಶಿಪ್‍ನ ಈಜು ಸ್ಪರ್ಧೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ್ ಖಾರ್ವಿ ಕೋಡಿ-ಕನ್ಯಾನ ಇವರು 100ಮೀ ಫ್ರೀಸ್ಟೈಲ್ ಚಿನ್ನದ ಪದಕ, 200ಮೀ ಫ್ರೀಸ್ಟೈಲ್ ಚಿನ್ನದ ಪದಕ ಪಡೆದಿದ್ದಾರೆ. ಒಟ್ಟು 2 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇವರು ಉಡುಪಿಯ ಅಜ್ಜರಕಾಡು ಈಜು ಕೊಳದ ತರಬೇತುದಾರರಾಗಿರುತ್ತಾರೆ. 2013ರಲ್ಲಿ ಕೈ ಕಾಲುಗಳನ್ನು ಕೋಳದಿಂದ ಬಂಧಿಸಿ ಅರಬ್ಬೀ ಸಮುದ್ರದಲ್ಲಿ 3.71 ಕಿ.ಮೀ. ಈಜಿ ಗಿನ್ನಿಸ್ ವಿಶ್ವ ದಾಖಲೆ ಮಾಡಿದ್ದಾರೆ.

ಗೋಪಾಲ್ ಖಾರ್ವಿ ಕೋಡಿ ಕನ್ಯಾನ ಇವರಿಗೆ ಭಾರತ ಮತ್ತು ಅಮೇರಿಕನ್ ವಿಶ್ವವಿದ್ಯಾಲಯವು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳಾದ “BEST SPORTS ACHIVER AWARD” ಮತ್ತು “CERTIFICATE OF EXCELLENCE AWARD ” ನೀಡಿ ಗೌರವಿಸಿದ್ದು, ಈ ಹಿಂದೆ ಗೋಪಾಲ್ ಖಾರ್ವಿಯವರು ಕರ್ನಾಟಕದ ಅತ್ಯುತ್ತಮ ಪ್ರಶಸ್ತಿಗಳಾದ ಕರ್ನಾಟಕ ರಾಜ್ಯೋತ್ಸವ , ಹಾಗೂ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಯನ್ನು, ರಾಜ್ಯಮಟ್ಟದ ಸಂದೇಶ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು ಇವರ ಈ ಸಾಧನೆಯನ್ನು ಮನಗಂಡ ರಾಜ್ಯ ಸರಕಾರವು ಕರ್ನಾಟಕದ ಕೊಂಕಣಿ 9ನೇ ತರಗತಿಯ ಪಠ್ಯ ಪುಸ್ತಕದಲ್ಲಿ ಜೀವನ ಚರಿತ್ರ ಗೋಪಾಲ್ ಖಾರ್ವಿ ಎಂಬ ಪಾಠವನ್ನು ಪ್ರಕಟಿಸಿರುವುದು ಅವರ ಸಾಧನೆಗೆ ಸಂದ ಅತ್ಯಂತ ಗೌರವಯುತ ಪ್ರಶಸ್ತಿಗಳೊಂದಾಗಿದೆ.

Leave a Reply

Your email address will not be published. Required fields are marked *