Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಯಕ್ಷಗಾನ ಮುಖವರ್ಣಿಕೆ ಶಿಬಿರ ಉದ್ಘಾಟನೆ

ಕೋಟ: ಯೋಗಾಭ್ಯಾಸದಂತೆ ದೇಹ ಮತ್ತು ಮನಸ್ಸಿನ ಸಮನ್ವಯಕ್ಕೆ ಯಕ್ಷಗಾನ ಕಲೆ ಪೂರಕ. ನಿರಂತರ ಯಕ್ಷಗಾನ ಅಭ್ಯಾಸ ಮಾಡುವುದರಿಂದ ದೇಹ–ಮನಸ್ಸುಗಳ ಕ್ಷಮತೆ ಹೆಚ್ಚುವುದರಿಂದ ದೈನಂದಿನ ಚಟುವಟಿಕೆಗಳಲ್ಲಿ ಉತ್ಸಾಹದಿಂದ ತೊಡಗಿಕೊಳ್ಳುವುದಕ್ಕೆ ಸಾಧ್ಯವಿದೆ. ಕಲೆಯಲ್ಲಿ ತೊಡಗಿಕೊಳ್ಳುವುದಕ್ಕೆ ವೃತ್ತಿಪರತೆಯ ಅಗತ್ಯವಿದೆ. ಯಕ್ಷಗಾನ ಕಲಾವಿದರಾದವರು ತಾವೇ ವೇಷ ಧರಿಸುವುದನ್ನು ಅಭ್ಯಾಸ ಮಾಡಕೊಳ್ಳಬೇಕು. ಅದರಲ್ಲಿಯೂ ಯಕ್ಷಗಾನ ಮೇಕಪ್‍ನಲ್ಲಿ ಪರಿಣಿತಿ ಇದ್ದರೆ ಹೆಚ್ಚಿನ ಸಾಧನೆ ಮಾಡಲು ಸಾಧ್ಯ.

ಯಕ್ಷಾಂಗಣ ಟ್ರಸ್ಟ್ ವಿದ್ಯಾರ್ಥಿಗಳಿಗೆ ಮುಖವರ್ಣಿಕೆ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಸೆ.3ರಂದು ಬೆಂಗಳೂರಿನ ತ್ಯಾಗರಾಜ ನಗರದಲ್ಲಿ ಬೆಂಗಳೂರಿನ ಯಕ್ಷಾಂಗಣ ಟ್ರಸ್ಟ್‍ನವರು ಆಯೋಜಿಸಿರುವ ಯಕ್ಷಗಾನ ಮುಖವರ್ಣಿಕೆ ಶಿಬಿರದ ಉದ್ಘಾಟನೆಯನ್ನು ವಿದ್ಯಾರ್ಥಿಗಳಿಗೆ ಮುಖವರ್ಣಿಕೆ ಮಾಡುವ ಮೂಲಕ ಉಡುಪಿ ಎಂ.ಜಿ.ಎಂ. ಕಾಲೇಜಿನ ಉಪನ್ಯಾಸಕ ಮತ್ತು ಯಕ್ಷಗಾನ ಕಲಾವಿದರಾದ ರಾಘವೇಂದ್ರ ತುಂಗ ರವರು ಚಾಲನೆ ನೀಡಿ ಮಾತನಾಡಿದರು.

ವೇದಿಕೆಯಲ್ಲಿ ಯಕ್ಷದೇಗುಲದ ಸುದರ್ಶನ ಉರಾಳ, ಯಕ್ಷ ಗುರು ಪ್ರಿಯಾಂಕ ಕೆ. ಮೋಹನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕು. ಸರಸ್ವತಿ ನಿರೂಪಿಸಿದರು. ಈ ಯಕ್ಷಗಾನ ಶಿಬಿರಕ್ಕೆ 35-40 ಮಕ್ಕಳು ಭಾಗವಹಿಸಿದರು.

ಬೆಂಗಳೂರಿನ ತ್ಯಾಗರಾಜ ನಗರದಲ್ಲಿ ಬೆಂಗಳೂರಿನ ಯಕ್ಷಾಂಗಣ ಟ್ರಸ್ಟ್‍ನವರು ಆಯೋಜಿಸಿರುವ ಯಕ್ಷಗಾನ ಮುಖವರ್ಣಿಕೆ ಶಿಬಿರಕ್ಕೆ ಉಡುಪಿ ಎಂ.ಜಿ.ಎಂ. ಕಾಲೇಜಿನ ಉಪನ್ಯಾಸಕ ಮತ್ತು ಯಕ್ಷಗಾನ ಕಲಾವಿದರಾದ ರಾಘವೇಂದ್ರ ತುಂಗ ರವರು ಚಾಲನೆ ನೀಡಿದರು.

Leave a Reply

Your email address will not be published. Required fields are marked *