
ಕೋಟ: ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬ್ರಹ್ಮಾವರ ವಲಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿ ಕನ್ಯಾಣ, ಇವರ ಸಹಭಾಗಿತ್ವದಲ್ಲಿ ಹಂಗಾರಕಟ್ಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2023-24 ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕೋಡಿ ಪಂಚಾಯತ್ ಅಧ್ಯಕ್ಷ ಪ್ರಭಾಕರ ಮೆಂಡನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ , ಸರಕಾರಿ ಪದವಿ ಪೂರ್ವ ಕಾಲೇಜು ಕೋಡಿ ಕನ್ಯಾಣ ಪ್ರಾಂಶುಪಾಲ ರಾಘವೇಂದ್ರ ಕೆ, ಬ್ರಹ್ಮಾವರ ಹೋಬಳಿ ಶಿಕ್ಷಣ ಸಂಯೋಜಕ ಬಿ.ಬಿ ಪ್ರಕಾಶ್, ಮಂದಾರ್ತಿ ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯ ಶ್ಯಾಮಸುಂದರ್ , ಬಿಆರ್‍ಪಿ ಸುರೇಶ್, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಮಹಾಬಲ ಕುಂದರ್ , ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ರಾಮಚಂದ್ರ ಖಾರ್ವಿ ಸದಸ್ಯರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೋಡಿ ತಲೆ ಮುಖ್ಯೋಪಾಧ್ಯಾಯ ಶಂಕರ , ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಬೆಂಗ್ರೆ ಮುಖ್ಯ ಶಿಕ್ಷಕಿ ಕಲ್ಪನಾ ಉಪಸ್ಥಿತರಿದ್ದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಂಪಾ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಹಂಗಾರಕಟ್ಟೆ ಸಿಆರ್‍ಪಿ ಅನುಪಮಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಸ್ಪರ್ಧೆಗಳಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಳ್ಳುವುದರ ಮೂಲಕ ಕಾರ್ಯಕ್ರಮವನ್ನು ಚಂದಗಾಣಿಸಿದರು.
ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಹಂಗಾರಕಟ್ಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2023-24 ಕಾರ್ಯಕ್ರಮ ಜರುಗಿತು.













Leave a Reply