
ಕೋಟ: ಬಿಜೆಪಿ ಸಾಲಿಗ್ರಾಮ ಮಹಾಶಕ್ತಿಕೇಂದ್ರ ಆಶ್ರಯದಲ್ಲಿ ಆಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಡಿ.೨೫ ರಂದು ಸಾಲಿಗ್ರಾಮ ಬಸ್ಸು ನಿಲ್ದಾಣದಲ್ಲಿ ಜರಗಿತು. ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಮಾತನಾಡಿ, ಆಟಲ್ ಜೀ ಅವರ ಆದರ್ಶ ನಮ್ಮೆಲ್ಲರ ಬದುಕಿಗೆ ಪ್ರೇರಣೆಯಾಗಿದ್ದು, ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರಿಗೆ ಗೌರವ ನೀಡಬೇಕು ಎಂದರು.
ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆಟಲ್ ಜೀ ಅವರ ಬದುಕು- ರಾಜಕೀಯ ಹೋರಾಟದ ಕುರಿತು ತಿಳಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೌರವಿಸಲಾಯಿತು.
ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ,ಗುರುರಾಜ್ ಗಂಟಿಹೊಳೆ, ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ಐರೋಡಿ ವಿಟ್ಠಲ ಪೂಜಾರಿ, ಬಿಜೆಪಿ ಪ್ರಭಾರಿ ಉದಯಕುಮಾರ್ ಶೆಟ್ಟಿ ಕಿದಿಯೂರು, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸದಸ್ಯ ಕಾರ್ಕಡ ರಾಜು ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಕುತ್ಯಾರು ನವೀನ ಕುಮಾರ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಸಾಲಿಗ್ರಾಮ ಮಹಾಶಕ್ತಿಕೇಂದ ಅಧ್ಯಕ್ಷ ಜಯೇಂದ್ರ ಪೂಜಾರಿ ಇದ್ದರು.
ಬಿಜೆಪಿ ಸಾಲಿಗ್ರಾಮ ಮಹಾಶಕ್ತಿಕೇಂದ್ರ ಆಶ್ರಯದಲ್ಲಿ ಆಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಡಿ.೨೫ ರಂದು ಸಾಲಿಗ್ರಾಮ ಬಸ್ಸು ನಿಲ್ದಾಣದಲ್ಲಿ ಜರಗಿತು.
Leave a Reply