
ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯನ್ನು ಭಾರತ್ ತೋಡೋ ಯಾತ್ರೆ ಎಂದಿರುವುದು ಹಾಸ್ಯಾಸ್ಪದ ಹಾಗೂ ಇದೊಂದು ರಾಜಕೀಯ ಪ್ರೇರಿತ ಹೇಳಿಕೆ. ಸಂಸದ ಡಿ. ಕೆ ಸುರೇಶ್ ರವರು ದೇಶದ ಐಕ್ಯತೆ, ಸಮಗ್ರತೆ, ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಕೇಂದ್ರ ಸರ್ಕಾರದ ಕುರಿತು ನೀಡಿರುವ ಹೇಳಿಕೆಯನ್ನು ಇಂದು ಬಿಜೆಪಿ ಅದನ್ನು ತಿರುಚಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ.
ಒಕ್ಕೂಟ ವ್ಯವಸ್ಥೆಯಲ್ಲಿ ಅನುದಾನದ ಹಂಚಿಕೆಯಲ್ಲಿ ಎಲ್ಲಾ ರಾಜ್ಯಗಳಿಗೂ ಸಮಾನ ಪಾಲು ನೀಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಆದರೆ ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದ್ದು ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡಿ ಉಳಿದ ರಾಜ್ಯಗಳಿಗೆ ಕಡಿಮೆ ಅನುದಾನ ನೀಡುತ್ತಿದೆ. ಈ ತಾರತಮ್ಯ ನೀತಿಯೇ ತೋರಿಸುತ್ತಿದೆ ಬಿಜೆಪಿಗೆ ರಾಷ್ಟದ ಹಿತಕ್ಕಿಂತ ರಾಜಕೀಯ ಹಿತವೇ ಹೆಚ್ಚು ಎಂದು. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರು ಭಾರತ್ ಜೋಡೋ ಯಾತ್ರೆಯನ್ನು ಟೀಕಿಸುವುದಕ್ಕಿಂತ ತಮ್ಮ ಸಂಸದರ ಮೂಲಕ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ತರುವಂತೆ ಒತ್ತಾಯಿಸುವುದು ಉತ್ತಮ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗೃಹಿಸಿದ್ದಾರೆ.














Leave a Reply