
ಕೋಟ: ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಕೋಟ ನೇತೃತ್ವದಲ್ಲಿ ಕೋಟ ಗ್ರಾಮಪಂಚಾಯತ್ ಸಹಯೋಗದೊಂದಿಗೆ ಐದು ದಿನಗಳ ಗ್ರಾಮೀಣ ಮಕ್ಕಳಿಗೆ ಬೇಸಿಗೆ ಶಿಬಿರ ಕಾರ್ಯಕ್ರಮ ಕೋಟ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮವನ್ನು ಕೋಟ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಮುಖ್ಯ ಶಿಕ್ಷಕ ಕೆ.ರಾಜಾರಾಮ್ ಐತಾಳ್ ಉಪಸ್ಥಿತರಿದ್ದರು. ಕೋಟ ಗ್ರಾ.ಪಂ ಗ್ರಂಥಪಾಲಕಿ ಜ್ಯೋತಿ ಗಿಳಿಯಾರು ಪ್ರಾಸ್ತಾವನೆ ಸಲ್ಲಿಸಿದರು.
ಕಾರ್ಯಕ್ರಮವನ್ನು ಕೋಟ ಗ್ರಾಮಪಂಚಾಯತ್ ಕಾರ್ಯದರ್ಶಿ ಶೇಖರ್ ಮರವಂತೆ ಸ್ಚಾಗತಿಸಿ ನಿರೂಪಿಸಿ ವಂದಿಸಿದರು. ಸುಮಾರು ಐವತ್ತಕ್ಕೂ ಅಧಿಕ ಶಿಬಿರಾರ್ಥಿಗಳು ಈ ಶಿಬಿರದಲ್ಲಿ ಭಾಗಿಯಾದರು.
ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಕೋಟ ನೇತೃತ್ವದಲ್ಲಿ ಬೇಸಿಗೆ ಶಿಬಿರವನ್ನು ಕೋಟ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಮುಖ್ಯ ಶಿಕ್ಷಕ ಕೆ.ರಾಜಾರಾಮ್ ಐತಾಳ್ ಉಪಸ್ಥಿತರಿದ್ದರು.
Leave a Reply