Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟತಟ್ಟು ಗ್ರಾಮ ಪಂಚಾಯತ್, ಫಲಾನುಭವಿಗಳಿಗೆ ಪಂಚಾಯತ್ ವತಿಯಿಂದ ಶ್ಲಾಘನೀಯ ಪತ್ರ

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಡಾ.ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಇತ್ತೀಚಿಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ  ಉದ್ಯೋಗ ಖಾತರಿ ಯೋಜನೆಯಡಿ ವಿವಿಧ ಕಾಮಗಾರಿಯ ಪ್ರಯೋಜನ ಪಡೆದ ಫಲಾನುಭವಿಗಳಿಗೆ ಪಂಚಾಯತ್ ವತಿಯಿಂದ ಶ್ಲಾಘನೀಯ ಪತ್ರ ನೀಡುವ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಪಟ್ಟಂತೆ ರೋಜ್ಗಾರ್ ದಿನಾಚರಣೆ ಮಾಹಿತಿ ಕಾರ್ಯಗಾರ ಕಾರ್ಯಕ್ರಮ ಜರಗಿತು.

ತಾಲೂಕು ಪಂಚಾಯತ್ ಬ್ರಹ್ಮಾವರದ ಸಹಾಯಕ ನಿರ್ದೇಶಕ ಮಹೇಶ್ ಅವರು ಮಾತನಾಡಿ  ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ  ಶ್ಲಾಘನಾ ಪತ್ರ ನೀಡಿ ಪ್ರೋತ್ಸಾಹ ನೀಡಿದ ಮೊದಲ ಗ್ರಾಮ ಪಂಚಾಯತ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ದನದ ಹಟ್ಟಿ, ಕೃಷಿ ಬಾವಿ, ಬಚ್ಚಲ ಗುಂಡಿ, ಗೊಬ್ಬರಗುಂಡಿ, ಕೋಳಿ ಶೆಡ್ ಇತ್ಯಾದಿ ರಚನೆಗೆ ಸಹಾಯಧನ ಪಡೆಯುವ ಬಗ್ಗೆ ಮಾಹಿತಿ ನೀಡಿದರು.

ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ಅಧ್ಯಕ್ಷತೆ  ವಹಿಸಿ ಮಾತನಾಡಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಸವಲತ್ತು ಪಡೆಯಲು ಸಾರ್ವಜನಿಕರಿಗೆ ತಿಳಿಸಿದರು.

ಈ ಸಂಧರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ  ವಾಸು ಪೂಜಾರಿ,  ರವೀಂದ್ರ ತಿಂಗಳಾಯ, ಅಶ್ವಿನಿ,  ವಿದ್ಯಾ, ಕಾರ್ಯದರ್ಶಿ  ಸುಮತಿ ಅಂಚನ್, ಉದ್ಯೋಗ ಖಾತ್ರಿ ಯೋಜನೆ ಫಲಾನುಭವಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್  ಕಾರ್ಯಕ್ರಮ ನಿರೂಪಿಸಿದರು.

ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತರಿ ಯೋಜನೆಯಡಿ ವಿವಿಧ ಕಾಮಗಾರಿಯ ಶ್ಲಾಘನೀಯ ಪತವನ್ನು ತಾಲೂಕು ಪಂಚಾಯತ್ ಬ್ರಹ್ಮಾವರದ ಸಹಾಯಕ ನಿರ್ದೇಶಕ ಮಹೇಶ್ ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ, ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ  ವಾಸು ಪೂಜಾರಿ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *