ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ ಪ್ರತಿಷ್ಠಾನ ಇದರ ವತಿಯಿಂದ ನೀಡಲಾಗುವ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿಯನ್ನು ನವೆಂಬರ್ 18ರಂದು ಬೆಂಗಳೂರಿನ ರಮಣಶ್ರೀ ಹೋಟೆಲಿನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಹಾಗೂ ಮಾಜಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಡುಪಿಯ ಸಾಹಿತಿ ಎಂಜಿಎಂ ಕಾಲೇಜಿನ ಉಪನ್ಯಾಸಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ಪ್ರದಾನ ಮಾಡಿದರು .
ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಗೋ. ರು. ಚನ್ನಬಸಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಮನು ಬಳಿಗಾರ ,ಸಾಹಿತಿಗಳಾದ ಷಡಕ್ಷರಿ , ವಿಶ್ವೇಶ್ವರ ಭಟ್ , ಸೋಮಶೇಖರ್ ಮುಂತಾದವರಿದ್ದರು .
ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ ಪ್ರದಾನ















Leave a Reply