
ಬೈಂದೂರು : ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ಸನ್ನಿಧಿಯಲ್ಲಿ ಕಾರ್ತಿಕ ದೀಪೋತ್ಸವ ಹಾಗೂ ಅಷ್ಟಾವಧಾನ ಸೇವೆ ನಡೆಯಿತು.

ಆನಗಳ್ಳಿ ಡಾ ಚೆನ್ನಕೇಶವ ಗಾಯತ್ರಿ ಭಟ್ ಇವರ ನೇತೃತ್ವದಲ್ಲಿ ವಿಶೇಷ ಅಲಂಕಾರ ಪೂಜೆ, ರಂಗ ಪೂಜೆ ಉತ್ಸವ, ತುಳಸಿ ಪೂಜೆ, ಅಷ್ಟಾವಧಾನ ಸೇವೆ ಹಾಗೂ ಉತ್ತರ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ಬಿ. ಕೃಷ್ಣಮೂರ್ತಿ ನಾವಡ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು.
ದೇವಳದ ಸೇವಾ ಸಮಿತಿ ಅಧ್ಯಕ್ಷ ನಾಗರಾಜ್ ಶೆಟ್ಟಿ, ಕಾರ್ಯದರ್ಶಿ ಎಸ್. ಶಿವರಾಮ ಪೂಜಾರಿ, ಸದಸ್ಯರಾದ ಶಂಕರ ಮೊಗವೀರ, ನಾಗರಾಜ ಗಾಣಿಗ, ಮಂಜುನಾಥ ಆಚಾರ್ಯ, ಸತ್ಯಪ್ರಸನ್ನ, ಪಾತ್ರಿಗಳಾದ ಅಣ್ಣಪ್ಪ ಪೂಜಾರಿ ಹಾಗೂ ಊರಿನ ಗ್ರಾಮಸ್ಥರು ದೀಪೋತ್ಸವದಲ್ಲಿ ಭಾಗವಹಿಸಿದ್ದರು.
ವರದಿ : ಎಚ್ ಸುಶಾಂತ್ ಆಚಾರ್ ಬೈಂದೂರು
Leave a Reply