Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬ್ರಹ್ಮಾವರ: ಮನೆಗೆ ಸಿಡಿಲು ಬಡಿದು ಹಾನಿ…!!

ಉಡುಪಿ: ಫೆಂಗಲ್ ಚಂಡಮಾರುತ ಭಾರೀ ಅನಾಹುತಗಳನ್ನು ಉಂಟು ಮಾಡಿದೆ. ಸೋಮವಾರ ಸಂಜೆ ಪ್ರಾರಂಭಗೊಂಡ ಮಳೆ ಉಡುಪಿ ಜಿಲ್ಲೆಯಲ್ಲಿ ಈಗಲೂ ಮುಂದುವರೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ ಸಮೀಪದ ಸೊಣಗಾರ ಬೆಟ್ಟು ಎಂಬಲ್ಲಿ ನಿನ್ನೆಯ ಅಬ್ಬರದ ಮಳೆಗೆ  ಸಿಡಿಲು ಬಡಿದು ಮನೆಗೆ ಹಾನಿಯುಂಟಾದ ಘಟನೆ  ಸಂಭವಿಸಿದೆ.

ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ನೀಲಾವರ ಸಮೀಪದ ಸೊಣಗಾರಬೆಟ್ಟು ರಾಧು ಶೆಡ್ತಿಯವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್‌ಉಪಕರಣಗಳಿಗೆ ಹಾನಿಯುಂಟಾಗಿದ್ದು, ವಿದ್ಯುತ್ ಉಪಕರಣಗಳು ಸುಟ್ಟು ಕರಕಲಾಗಿವೆ. ಇನ್ನು ರಾತ್ರಿಯಿಂದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದ್ದು ಜನರು ಪರದಾಡುವಂತಾಗಿದೆ.

Leave a Reply

Your email address will not be published. Required fields are marked *