Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಡುಪಿ : ಮರಳು ಸಾಗಾಟದ ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಓರ್ವ ಮೃತ್ಯು, ಮತ್ತೋರ್ವ ಗಂಭೀರ…!!

ಉಡುಪಿ: ಮಣಿಪಾಲ ನಗರ ಠಾಣೆ ವ್ಯಾಪ್ತಿಯ ಅಲೆವೂರು – ಮಣಿಪಾಲ ರಸ್ತೆಯ ಶಾಂತಿನಗರದ ಬಳಿ ತಿರುವಿನಲ್ಲಿ ಮರಳು ಸಾಗಾಟದ ಟಿಪ್ಪರ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಬೈಕ್‌ ಸವಾರ ಕಾರವಾರ ಮೂಲದ ವ್ಯಕ್ತಿ ಮೃತಪಟ್ಟರೆ, ಸಹಸವಾರ ಹಿರಿಯಡ್ಕ ಪರಿಸರದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಘಟನೆ ಶುಕ್ರವಾರ ರಾತ್ರಿ 9.30ರ ವೇಳೆಗೆ ಸಂಭವಿಸಿದ್ದು, ಗಾಯಾಳು ಗಳನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ವೇಳೆ ಓರ್ವ ವ್ಯಕ್ತಿ ಮೃತಪಟ್ಟ ಬಗ್ಗೆ ವೈದ್ಯರು ದೃಢಪಡಿಸಿದರು. ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.  ಸ್ಥಳಕ್ಕೆ ಮಣಿಪಾಲ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *