
ಕೋಟ: ಹಂಗಾರಕಟ್ಟೆ ದೂಳಂಗಡಿ ಸರಕಾರಿ ಹಿ.ಪ್ರಾ.ಶಾಲೆಯ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ಶಾಲಾ ವಠಾರದಲ್ಲಿ ನಡೆಯಿತು
ಕಾರ್ಯಕ್ರಮವನ್ನು ಉದ್ಘಾಟಿಸಿದ ಮಲ್ಪೆ ಕೊಚ್ಚಿನ್ ಶಿಫ್ಯಾರ್ಡ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ರಾಗದ ಪುಸ್ತಕದ ಮೇಲೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಭರತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ರಾಜಶೇಖರ್ ಹೆಬ್ಬಾರ್, ಬ್ರಹ್ಮಾವರ ವಲಯದ ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ., ಸಮೂಹ ಸಂಪನ್ಮೂಲ ವ್ಯಕ್ತಿ ಮಾಲಿನಿ, ಎಸ್.ಡಿ.ಎಂ.ಸಿ ಅಧ್ಯಕ್ಷೆ ರೇಖಾ ಉಡುಪ, ಉಪಾಧ್ಯಕ್ಷ ಶೇಖರ್ ಪೂಜಾರಿ, ಮಾಬುಕಳ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಆನಂದ ಗಾಣಿಗ, ಉಪಾಧ್ಯಕ್ಷ ಶೇಖರ್ ಪೂಜಾರಿ, ಮುಖ್ಯ ಶಿಕ್ಷಕಿ ಪ್ರೆಸಿಲ್ಲಾ ಉಪಸ್ಥಿರಿದ್ದರು.
ಈ ಸಂದರ್ಭದಲ್ಲಿ ಕಳೆದ ಐದು ವರ್ಷಗಳಿಂದ ವಿದ್ಯಾರ್ಥಿಗಳು ವಿಜ್ಞಾನ ಮಾದರಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಲು ಮಾರ್ಗದರ್ಶಕರಾದ ಸಹಾಯಕ ಅಧ್ಯಾಪಕಿ ವೀಣಾ ಅವರನ್ನು ಅಭಿನಂದಿಸಲಾಯಿತು. ಸಹ ಶಿಕ್ಷಕಿ ಉಷಾರಾಣಿ ಸ್ವಾಗತಿಸಿ. ಚಿತ್ರಪಾಡಿ ಶಾಲಾ ದೈಹಿಕ ಶಿಕ್ಷಕ ಸತೀಶ್ ಚಿತ್ರಪಾಡಿ ನಿರೂಪಿಸಿದರು.
ಹಂಗಾರಕಟ್ಟೆ ದೂಳಂಗಡಿ ಸರಕಾರಿ ಹಿ.ಪ್ರಾ.ಶಾಲೆಯ ವಾರ್ಷಿಕೋತ್ಸ ವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಲ್ಪೆ ಕೊಚ್ಚಿನ್ ಶಿಫ್ಯಾರ್ಡ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಕುಮಾರ್ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಭರತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ರಾಜಶೇಖರ್ ಹೆಬ್ಬಾರ್, ಬ್ರಹ್ಮವರ ವಲಯದ ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ. ಮತ್ತಿತರರು ಇದ್ದರು.














Leave a Reply