Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೊರಗ ಕುಟುಂಬಕ್ಕೆ ಮನೆ ನಿರ್ಮಾಣ ಡಿಸಿಯಿಂದ, ಪರಿಶೀಲನೆ ಶಹಬಾಷ್

ಕೋಟ: ಇಲ್ಲಿನ ಕೋಟತಟ್ಟು ಗ್ರಾಮಪಂಚಾಯತ್ ನೇತೃತ್ವದಲ್ಲಿ ಕೋಟತಟ್ಟು ವ್ಯಾಪ್ತಿಯ ಚಿಟ್ಟಿಬೆಟ್ಟು ಪರಿಸರದ ಎಂಟು  ಕೊರಗ ಕಟುಂಬಕ್ಕೆ ಮನೆ ನಿರ್ಮಿಸಿಕೊಡುತ್ತಿರುವ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಪರಿಶೀಲಿಸಿದರು.

ಹಲವಾರು ವರ್ಷಗಳಿಂದ ಗುಡಿಸಲು ಮನೆಯಲ್ಲಿ ವಾಸ್ತವ್ಯವಿರುವ ಈ ಕುಟುಂಬಳಿಗೆ ಸೂರು ಕಲ್ಪಿಸುವ ಪಂಚಾಯತ್ ಹಾಗೂ ಇಲ್ಲಿನ ದಾನಿಗಳ ಕೊಡುಗೆಯನ್ನು ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಪ್ರಶಂಸಿದರಲ್ಲದೆ ಇಂಥಹ ಯೋಜನೆಗಳು ಕಾರ್ಯಾಂಗದ ಮೇಲೆ ನಂಬಿಕೆ ಹಾಗೂ ಜನಸಮುದಾಯವನ್ನು ಮತ್ತಷ್ಟು ಹತ್ತಿರಗೊಳಿಸುತ್ತದೆ ಎಂದು ನಿರ್ಮಾಣಗೊಳ್ಳುತ್ತಿರುವ ಎಂಟು ಮನೆಗಳನ್ನು ವಿಕ್ಷೀಸಿ ಅಲ್ಲಿನ ಕೊರಗ ಸಮುದಾಯದವರ ಮಾಹಿತಿಯನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಪoಚಾಯತ್ ಸದಸ್ಯರಾದ ಪ್ರಕಾಶ್ ಹಂದಟ್ಟು,ವಿದ್ಯಾ ಸಾಲಿಯಾನ್,ಸೀತಾ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್,ಮಾಜಿ ಸದಸ್ಯ ರಾಜೇಶ್ ಪೂಜಾರಿ, ಕೊರಗ ಸಮುದಾಯದ ಮುಖಂಡರಾದ ಗಣೇಶ್ ಕುಂಭಾಶಿ, ಗಣೇಶ್ ಬಾರಕೂರು, ಪಂಚಾಯತ್ ಸಿಬ್ಬಂದಿ ರವಿ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಕೋಟತಟ್ಟು ಗ್ರಾಮಪಂಚಾಯತ್ ನೇತೃತ್ವದಲ್ಲಿ ಕೋಟತಟ್ಟು ವ್ಯಾಪ್ತಿಯ ಚಿಟ್ಟಿಬೆಟ್ಟು ಪರಿಸರದ ಎಂಟು  ಕೊರಗ ಕಟುಂಬಕ್ಕೆ ಮನೆ ನಿರ್ಮಿಸಿಕೊಡುತ್ತಿರುವ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಪರಿಶೀಲಿಸಿದರು. ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್,ಕಾರ್ಯದರ್ಶಿ ಸುಮತಿ ಅಂಚನ್, ಕೊರಗ ಸಮುದಾಯದ ಮುಖಂಡರಾದ ಗಣೇಶ್ ಕುಂಭಾಶಿ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *