
ಕೋಟ: ಇದೇ ಬರುವ ಎಪ್ರಿಲ್ 2,3ರಂದು ಸಾಲಿಗ್ರಾಮ ಹಳೆಕೋಟೆ ಮೈದಾನದಲ್ಲಿ ನಡೆಸಲುದ್ದೇಶಿಸಲಾದ ಶ್ರೀನಿವಾಸ ಕಲ್ಯಾಣೋತ್ಸವದ ಪದಾಧಿಕಾರಿಗಳ ಆಯ್ಕೆ ಕುರಿತು ಸಭೆ ಮಂಗಳವಾರ ಸಾಸ್ತಾನದ ಶಿವಕೃಪಾ ಕಲ್ಯಾಣಮಂಟಪದಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಸಾಸ್ತಾನ ಪಾಂಡೇಶ್ವರ ಯೋಗಗುರುಕುಲದ ಮುಖ್ಯಸ್ಥ ಡಾ.ವಿದ್ವಾನ್ ವಿಜಯ ಮಂಜರ್ ವಹಿಸಿ ಮಾತನಾಡಿ ಲೋಕಕಲ್ಯಾಣಾರ್ಥವಾಗಿ ಈ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಧಾರ್ಮಿಕ ಹಾಗೂ ಸಾಂಸ್ಕöÈತಿಕ ನಗರಿಯಾಗಿ ಗುರುತಿಸಿಕೊಂಡ ಹದಿನಾಲ್ಕು ಗ್ರಾಮಗಳ ಕೇಂದ್ರದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾಲ ಕಾಲಕ್ಕೆ ಧರ್ಮ ಜಾಗೃತಿ ಮೂಡಿಸುವ ಅವಶ್ಯಕತೆ ಇದ್ದು ಈ ಹಿಂದೆ ಸೀತಾರಾಮ ಕಲ್ಯಾಣೋತ್ಸವ ಹಮ್ಮಿಕೊಂಡಿದ್ದು ಯಶಸ್ವಿಯಾಗಿ ನೆರವೆರಿದೆ ಅದರಂತೆ ಇದೀಗ ಶ್ರೀನಿವಾಸ ಕಲ್ಯಾಣೋತ್ಸವ ಯಶಸ್ವಿಯಾಗಲು ನಿಮ್ಮೆಲ್ಲರ ಸಹಕಾರವನ್ನು ಕೋರುತ್ತಿದ್ದೇವೆ ಇದರಲ್ಲಿ ಯಾವುದೇ ತಪುö್ಪ ಹುಡುಕುವ ಕಾರ್ಯ ಬೇಡ ಎಲ್ಲರೂ ಸ್ವಯಂ ರೀತಿಯಲ್ಲಿ ಈ ತಿಮ್ಮಪ್ಪನ ಕಾರ್ಯದಲ್ಲಿ ಕೈಜೋಡಿಸಿ ಎಂದು ಕರೆ ಇತ್ತರು.
ಇದೇ ವೇಳೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ ಪದಾಧಿಕಾರಿಗಳ ಪಟ್ಟಿ ವಾಚಿಸಿ ವಿವಿಧ ಸ್ಥರದ ತಂಡಗಳ ರಚನೆಗಳ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಹಲವು ಗಣ್ಯರು ತಮ್ಮತಮ್ಮ ಅಭಿಪ್ರಾಯಗಳನ್ನು ಹಂಚಿಕೊoಡರು. ವೇದಿಕೆಯಲ್ಲಿ ಸಮಿತಿಯ ಅಧ್ಯಕ್ಷ ಎಂ.ಸಿ ಚಂದ್ರಶೇಖರ್, ಸoಚಾಲಕ ಪ್ರತಾಪ್ ಶೆಟ್ಟಿ ಸಾಸ್ತಾನ, ಮಹಿಳಾ ಸಮಿತಿಯ ಪ್ರಮುಖರಾದ ಲಿಲಾವತಿ ಗಂಗಾಧರ್, ಸಮಿತಿಯ ಪ್ರಮುಖರಾದ ಎಂ.ಸುಬ್ರಾಯ ಆಚಾರ್ ಉಪಸ್ಥಿತರಿದ್ದರು.
ಶ್ರೀನಿವಾಸ ಕಲ್ಯಾಣೋತ್ಸವದ ಪದಾಧಿಕಾರಿಗಳ ಆಯ್ಕೆ ಕುರಿತು ಸಭೆಯಲ್ಲಿಪಾಂಡೇಶ್ವರ ಯೋಗಗುರುಕುಲದ ಮುಖ್ಯಸ್ಥ ಡಾ.ವಿದ್ವಾನ್ ವಿಜಯ ಮಂಜರ್ ಮಾತನಾಡಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ, ಸಮಿತಿಯ ಅಧ್ಯಕ್ಷ ಎಂ.ಸಿ ಚಂದ್ರಶೇಖರ್, ಸoಚಾಲಕ ಪ್ರತಾಪ್ ಶೆಟ್ಟಿ ಸಾಸ್ತಾನ ಇದ್ದರು.














Leave a Reply