ಉಡುಪಿ, ಮಾ.26: ಉಡುಪಿ ಕೋರ್ಟ್ ಆವರಣದಲ್ಲಿರುವ ತನ್ನ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ವಿ.ನಾಯ್ಕ ಎಂಬವರನ್ನು ಉಡುಪಿ ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ.
ಸೈಯದ್ ನಿಜಮುದ್ದಿನ್ ದೂರಿನ ಮೇಲೆ ಮರಳು ವಾಹನದ ಬಿಡುಗಡೆಗೆ ಸಂಬಂಧ ರೂ 2000 ಬೇಡಿಕೆ ಇಟ್ಟಿದ್ದಾರೆ ಎನ್ನುವ ದೂರಿನ್ವಯ, ಇಂದು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಉಡುಪಿ ನ್ಯಾಯಾಲಯದಲ್ಲಿರುವ ಕಚೇರಿಯಲ್ಲಿ 2ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗಣಪತಿ ನಾಯ್ಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಲೋಕಾಯುಕ್ತ ಮಂಗಳೂರು ಪ್ರಭಾರ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಪ್ರಭಾರ ಡಿವೈಎಸ್ಪಿ ಮಂಜುನಾಥ್, ಪೊಲೀಸ್ ನಿರೀಕ್ಷಕ ರಾಜೇಂದ್ರ ನಾಯಕ್ ಎಂ.ಎನ್, ಎಎಸ್ಸೈ ನಾಗೇಶ್ ಉಡುಪ, ಸಿಬ್ಬಂದಿ ನಾಗರಾಜ್, ಸತೀಶ್ ಹಂದಾಡಿ, ರೋಹಿತ್, ಮಲ್ಲಿಕಾ, ಪುಷ್ಪಾವತಿ, ರವೀಂದ್ರ, ರಮೇಶ್, ಅಬ್ದುಲ್ ಜಲಾಲ್, ಪ್ರಸನ್ನ, ರಾಘವೇಂದ್ರ ಹೊಸಕೋಟೆ, ಸುಧೀರ್, ಸತೀಶ್ ಆಚಾರ್ಯ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.















Leave a Reply