
ಇತಿಹಾಸ ಆಧಾರವುಳ್ಳದ್ದು, ಈ ಆಧಾರಗಳು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಭೌಗೋಳಿಕ ಹೀಗೆ ಎಲ್ಲಾ ಕ್ಷೇತ್ರಗಳ ಸಮಗ್ರ ವಿಶ್ಲೇಷಣೆಗೆ ಸಹಾಯ ಮಾಡುತ್ತವೆ. ಭಾರತ ಐತಿಹಾಸಿಕ ಆಧಾರಗಳ ತಾಣವೇ ಆಗಿದೆ. ಶಾಸನಗಳು, ನಾಣ್ಯಗಳು ಇತ್ಯಾದಿ ಇದಕ್ಕೆ ಸಾಕ್ಷಿ. ಆದರೆ,
ಪಾಶ್ಚಾತ್ಯರು ಭಾರತೀಯರಿಗೆ ಐತಿಹಾಸಿಕ ಪ್ರಜ್ಞೆ ಇಲ್ಲ ಎಂದು ಆಪಾದಿಸುತ್ತಾರೆ. ಇದು ಸತ್ಯಕ್ಕೆ ದೂರವಾದುದು. ಭಾರತೀಯರ ಐತಿಹಾಸಿಕ ಪ್ರಜ್ಞೆ ಉನ್ನತಾದರ್ಶದಿಂದ ಕೂಡಿದೆ ಎಂದು ಕೇಂದ್ರ ಸರ್ಕಾರ ಪ್ರಶಸ್ತಿ ಪುರಸ್ಕೃತ ಇತಿಹಾಸ ತಜ್ಞ ಮತ್ತು ಸಂಶೋಧಕ ಬೆಂಗಳೂರಿನ ಶ್ರೀ
ಸತ್ಯನಾರಾಯಣ ಕಾರ್ತಿಕ್ ತಿಳಿಸಿದರು.
ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣ ಇಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಕಾಲೇಜಿನ ಇತಿಹಾಸ ವಿಭಾಗದ ವತಿಯಿಂದ ಇತಿಹಾಸದ ದಾಖಲೀಕರಣ’ ವಿಷಯ ಕುರಿತು ನಡೆದ ಒಂದು ದಿನದ
ವಿಚಾರಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಇತಿಹಾಸವನ್ನು ಪುನರ್ ಕಟ್ಟುವ ಕೈಂಕರ್ಯದ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿ ವಿದ್ವಾನ್ ಅನಂತೇಶ್ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡುತ್ತ ಇತಿಹಾಸದ
ವಸ್ತುನಿಷ್ಠ ಸಂಶೋಧನೆ, ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಕಟ್ಟುವಲ್ಲಿ ಸಹಕಾರಿಯಾದುದು ಹಾಗಾಗಿ ಪ್ರಾಚೀನ ಭಾರತೀಯ ಸಂಸ್ಕೃತಿ.ಶ್ರೇಷ್ಠವಾದುದು.
ಇತಿಹಾಸದ ಕಾಲಗರ್ಭದಲ್ಲಿ ಅಡಗಿರುವ ದಾಖಲೆಗಳು
ಮತ್ತು ಅವುಗಳ ಸತ್ಯಾಸತ್ಯತೆಯ ಬಗ್ಗೆ ವಸ್ತುನಿಷ್ಠವಾಗಿ
ಅಧ್ಯಯನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಇತಿಹಾಸದ ಮಹತ್ವವನ್ನು ಸಾರಬೇಕು ಎಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್ ಅಧ್ಯಕ್ಷತೆಯನ್ನು ವಹಿಸಿ ಇತಿಹಾಸದ ಮಹತ್ವವನ್ನು ತಿಳಿದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಸಮಯಪ್ರಜ್ಞೆ ಮತ್ತು ನಿರಂತರ ಕಲಿಕೆಯೊಂದಿಗೆ
ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕೆಂದು ತಿಳಿಸಿದರು.
ಇತಿಹಾಸ ವಿಭಾಗ ಮುಖ್ಯಸ್ಥ ಶ್ರೀ ಮಾರ್ಕಂಡಯ್ಯ ಸ್ವಾಗತಿಸಿ, ನಿರೂಪಿಸಿದರು. ಉಪನ್ಯಾಸಕ ಸತೀಶ್ ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಗಿರೀಶ್ ಶಾನುಭೋಗ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜನಾಧಿಕಾರಿ ಡಾ.ವಸಂತ.ಜಿ, ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಕಲಾ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Leave a Reply