Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕುರಿಗಾಹಿಗಳ ಆತ್ಮ ರಕ್ಷಣೆಗೆ ಬಂದೂಕು ತರಬೇತಿ ಅಗತ್ಯ : ಡಿಸಿ ಜಾನಕಿ

ವರದಿ : ಅಶ್ವಿನಿ ಅಂಗಡಿ

ಬಾಗಲಕೋಟೆ : ಕಠಿಣ ಸವಾಲಿನ  ಜೀವನಶೈಲಿ ಹೊಂದಿರುವ ಕುರಿಗಾಯಿಗಳಿಗೆ ಆತ್ಮರಕ್ಷಣೆಯು ಅತ್ಯಂತ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು. ನವನಗರದ ಪೊಲೀಸ್ ಮಂಗಳ ಭವನದಲ್ಲಿ  ಕುರಿಗಾಯಿಗಳಿಗಾಗಿ ಆಯೋಜಿಲಗಿರುವ ಬಂದೂಕು ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಳೆ, ಬಿಸಿಲು, ಗುಡ್ಡ-ಗಾಡು ಪ್ರದೇಶಗಳಲ್ಲಿ ಒಬ್ಬಂಟಿಯಾಗಿ ತಮ್ಮ ಕುರಿಗಳನ್ನು ಮೇಯಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಕುರಿಗಾಯಿಗಳು ಮತ್ತು ಅವರ ಕುರಿಗಳ ರಕ್ಷಣೆಗೆ ಸಹಾಯವಾಗುವಂತೆ ವಿಶೇಷ ಬಂದೂಕು ತರಬೇತಿ ಶಿಬಿರ ಆಯೋಜಿಸಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು  ಎಂದರು. ಕುರಿಗಾಯಿಗಳು ತಮ್ಮ ಕುರಿಗಳನ್ನು ಬೇರೆ ಬೇರೆ ಪ್ರದೇಶಗಳಿಗೆ ಮೇಯಿಸಲು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ, ಅವರ ರಕ್ಷಣೆಗಾಗಿ ಬಂದೂಕು ತರಬೇತಿ ನೀಡಲಾಗುತ್ತಿದೆ. ಈ ತರಬೇತಿಯಲ್ಲಿ ಏಕಾಗ್ರತೆಯಿಂದ ಪಾಲ್ಗೊಂಡು, ಉತ್ತೀರ್ಣರಾಗಿ ಬಂದೂಕು ಪರವಾನಿಗೆಯನ್ನು ಪಡೆಯಬೇಕು,” ಎಂದು ಅವರು ತಿಳಿಸಿದರು.

ಬಂದೂಕು ಜತೆ ನಡವಳಿಕೆಯಲ್ಲಿ ಅತ್ಯಂತ ಸೂಕ್ಷ್ಮತೆ ಅಗತ್ಯವಾಗಿದೆ. “ಬಂದೂಕು ಭಾವನೆ ರಹಿತವಾಗಿದೆ, ಅದು ಜೀವಕ್ಕೆ ಅಪಾಯ ತರಬಲ್ಲದು. ಬಂದೂಕನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಫೋಟೋಗೆ ಇಲ್ಲವೇ ಪ್ರದರ್ಶನಕ್ಕಾಗಿ ಸ್ನೇಹಿತರಿಗೆ ಕೊಡಬಾರದು,” ಎಂದು ಅವರು ಎಚ್ಚರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ ಏಪ್ರಿಲ್ 13ರ ವರೆಗೆ ನಡೆಯುತ್ತಿರುವ ಈ ಶಿಬಿರದಲ್ಲಿ 500ಕ್ಕೂ ಹೆಚ್ಚು ಕುರಿಗಾಯಿಗಳು ಭಾಗವಹಿಸಿದ್ದಾರೆ. ಶಿಬಿರದಲ್ಲಿ ಗುರಿ ನಿಖರವಾಗಿ ಹೇಗೆ ಇಡಬೇಕು, ಬಂದೂಕು ಹಸ್ತಾಂತರಿಸುವ ವಿಧಾನ, ಕಾನೂನು ನಿಯಮಗಳು ಮತ್ತು ಶಿಸ್ತು ಕುರಿತು ತರಬೇತಿ ನೀಡಲಾಗುತ್ತಿದೆ. ತರಬೇತಿಯ ನಂತರ ಕಾಡು ಪ್ರಾಣಿಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು.

ದುರುಪಯೋಗ ಮಾಡಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಶಿಬಿರದಲ್ಲಿ ಮೂರು ಮಹಿಳೆಯರು ಸಹ ಭಾಗವಹಿಸಿದ್ದು, ತೇರದಾಳ ತಾಲ್ಲೂಕಿನ ಸಸಲಾಟ್ಟಿ ಗ್ರಾಮದ ಸಾಕ್ಷಿ ಎಂಬ ಯುವತಿಯು ವಿಶೇಷ ಗಮನ ಸೆಳೆದಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರ, ಕಾಶಿನಾಥ್ ಹುಡೇದ,  ಹಾಲುಮತ ಸಮಾಜದ ರಾಜ್ಯ ಕಾರ್ಯದರ್ಶಿ ಸುವರ್ಣ, ತರಬೇತಿದಾರರು ಉಪಸ್ಥಿತರಿದ್ದರು.

ತರಬೇತಿಗೆ ಬಂದoತಹ ಕುರಿಗಾಯಿಗಳು, ಸೋಲಾರ್ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ, ಅರಣ್ಯ ಪ್ರದೇಶಗಳಲ್ಲಿ ಕುರಿ ಮೇಯಲು ಮೀಸಲು ಅನುಮತಿ, ಬ್ಯಾಂಕುಗಳಲ್ಲಿ ಸಾಲ ಸೌಲಭ್ಯ, ಸುರಕ್ಷಿತ ಪರಿಸರ ಹಾಗೂ ಕುರಿಗಾಯಿಗಳ ಹಕ್ಕುಗಳಿಗೆ ರಕ್ಷಣೆ ನೀಡುವ ಕಾಯ್ದೆ ರೂಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು  ಜಿಲ್ಲಾಧಿಕಾರಿ ಜಾನಕಿ ಕೆ ಎಂ ಅವರಿಗೆ ಸಲ್ಲಿಸಿದರು.

Leave a Reply

Your email address will not be published. Required fields are marked *