ಕೋಟ: ಕುಂದಾಪ್ರ ಕನ್ನಡದ ನಿಜವಾದ ಸೊಗಡು ಕಾಣ ಸಿಗುವುದು ಗ್ರಾಮಾಂತರ ಭಾಗದಲ್ಲಿ. ಗ್ರಾಮೀಣ ಭಾಗದ ನಟ್ಟಿ ನೆಡುವ ಹೆಂಗಸರು, ಉಳುಮೆ ಮಾಡುವ ಗಂಡಸರು, ಭತ್ತ ತುಳಿಯುವವರು ಹೀಗೆ ಹತ್ತಾರು ವಿಭಾಗಗಳಿಂದ ಕುಂದಾಪ್ರ ಕನ್ನಡದ ಸೊಗಡು ಹರಿದು ಬಂದಿದೆ. ಅವೆಲ್ಲದರ ದಾಖಲೀಕರಣ ಅಗತ್ಯ ಎಂದು ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ತಿಳಿಸಿದರು.
ಅವರು ಭಾನುವಾರ ಕೋಟ ಡಾ. ಶಿವರಾಮ ಕಾರಂತ ಪ್ರತಿಷ್ಠಾನ, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ, ಕೋಟತಟ್ಟು ಗ್ರಾ.ಪಂ., ಉಸಿರು ಸಂಸ್ಥೆ ಕೋಟ, ಗೀತಾನಂದ ಫೌಂಡೇಶನ್, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಆಶ್ರಯದಲ್ಲಿ ಮೇ 4ಕ್ಕೆ ಕೋಟದ ಕಾರಂತ ಥೀಮ್ ಪಾರ್ಕನಲ್ಲಿ ನಡೆದ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ಕಾಂಬ ಉದ್ಘಾಟನೆ ಮಾಡಿ ಮಾತನಾಡಿದರು.
ಭಾಷಿ ಬೆಳ್ಸಕರೆ ಮೊದಲ್ ಮಕ್ಕಳಿಗ್ ಹೇಳಿ ಕೊಡ್ಕ್. ಸರಕಾರ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಕುಂದಾಪ್ರ ಭಾಷಿ ಬಗ್ಗೆ ಕೆಲಸ ಮಾಡಬೇಕು ಎಂದರು. ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಡಾ. ಅಣ್ಣಯ್ಯ ಕುಲಾಲ ಉಳ್ತೂರು
ಮಾತನಾಡಿ, ನಮ್‌ಭಾಷಿನ ಪ್ರೀತಿ ಮಾಡ್ಕ್ ; ಬೇರೆ ಭಾಷಿ ಬಗ್ಗೆ ಆಸಕ್ತಿ ತೋರ್ಸ್್ಕ ಆಗಲಿಕೆ ಎಲ್ಲ ವಿಚಾರ ತಿಳುಕೆ ಸಾಧ್ಯ ಕುಂದಾಪ್ರ ಕನ್ನಡದ ಈ ಕಾರ್ಯಕ್ರಮ ಒಂದಷ್ಟ್ ಜನರಿಗೆ ಪ್ರೇರಣೆಯಾಗಲಿ ಎಂದರು.
ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್ ಬಾರಿಕೆರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಸಾಹಿತಿ ಎ.ಎಸ್ ಎನ್ ಹೆಬ್ಬಾರ,ಕಸಾಪ ಜಿಲ್ಲಾಧ್ಯಕ್ಷ ಸುರೇಂದ್ರ ಅಡಿಗ,ಕಾರಂತ ಪ್ರತಿಷ್ಠಾನದ ಕಾರ್ಯಧ್ಯಕ್ಷ ಆನಂದ ಸಿ.ಕುಂದರ್, ಕನ್ನಡ ಸಂಸ್ಕöÈತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ, ಕಾರಂತ ಟ್ರಸ್ಟ್ ಟ್ರಸ್ಟಿ ಸುಬ್ರಾಯ ಆಚಾರ್ಯ ಇದ್ದರು.
ಕಾರ್ಯಕ್ರಮದ್ ಸಂಯೋಜಕ, ಕಾರಂತ ಟ್ರಸ್ಟಿನ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ, ಸತೀಶ್ ವಡ್ಡರ್ಸೆ ಕಾರ್ಯಕ್ರಮದ ಆಶಯದ ಬಗ್ಗೆ ಮಾತನಾಡಿದರು.ಕಾರ್ಯಕ್ರಮವನ್ನು ಸ್ಥಳೀಯ ಶಿಬಿರಾರ್ಥಿ ಮಕ್ಕಳು ಕುಂದಗನ್ನಡದಲ್ಲಿ ನಿರೂಪಿಸಿ ಗಮನ ಸೆಳೆದರು. ಬ್ರಹ್ಮಾವರ ತಾಲೂಕು ಕ.ಸಾ.ಪ. ಅಧ್ಯಕ್ಷ ರಾಮಚಂದ್ರ ಐತಾಳ ಧನ್ಯವಾದ ಸಲ್ಲಿಸಿದರು. ಕವಿಗೋಷ್ಠಿ, ಕುಂದಕನ್ನಡದ ಹರಟೆ, ಅಧ್ಯಕ್ಷರ ಜತಿಗೆ ಮಾತುಕತೆ ನಡೆಯಿತು.
ಕುಂದಾಪ್ರ ಜನರ ಭಾಷಿ ಎಷ್ಟ್ ಚೆಂದ್ವೋ ಇಲ್ಲಿನ್ ಸಂಸ್ಕöÈತಿಯೂ ಅಷ್ಟೇ ಚೆಂದ. ಹೂವಿನ್ ಕೋಲ್, ದಿಮ್ಸಾಲ್, ಬೊಂಬಿಯಾಟ, ಯಕ್ಷಗಾನ, ಹೌಂದರಾಯನ ಓಲ್ಗಾ, ಗೋಂಡ್ಲ, ತುಳ್ಸಿ ಪೂಜೆ ಇದೆಲ್ಲ ಬೇರೆಲ್ಲೂ ಕಾಂಬುಕ್ ಸಿಕ್ಕುದಿಲ್ಲ. ಇದನ್ನ ಮುಂದಿನ ಜನಾಂಗಕ್ಕೆ ಪರಿಚಯ ಮಾಡು ಅಗತ್ಯ ಇತ್.ಪ್ರಪಂಚದoಗೆ ಇಪ್ಪತ್-ಇಪ್ಪತೈದ್ ಲಕ್ಷ ಜನ ಮಾತಾಡು ನಮ್ ಭಾಷಿ ಯಾವ್ ದೊಡ್ ಪ್ರಾದೇಶಿಕ ಭಾಷಿಗೂ ಕಮ್ಮಿ ಇಲ್ಲ ಎಂದು ಸಮ್ಮೇಳನಾಧ್ಯಕ್ಷ ಡಾ.ಅಣ್ಣಯ್ಯ ಕುಲಾಲ್ ತಮ್ಮ ಮಾತುಗಳಲ್ಲಿ ತಿಳಿಸಿದರು.
ಕೋಟ ಡಾ. ಶಿವರಾಮ ಕಾರಂತ ಪ್ರತಿಷ್ಠಾನ, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ, ಕೋಟತಟ್ಟು ಗ್ರಾ.ಪಂ., ಉಸಿರು ಸಂಸ್ಥೆ ಕೋಟ, ಗೀತಾನಂದ ಫೌಂಡೇಶನ್, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಆಶ್ರಯದಲ್ಲಿ ಮೇ 4ಕ್ಕೆ ಕೋಟದ ಕಾರಂತ ಥೀಮ್ ಪಾರ್ಕನಲ್ಲಿ ನಡೆದ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ಕಾಂಬ ಉದ್ಘಾಟನೆಯನ್ನು ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಗೈದರು. ಡಾ. ಅಣ್ಣಯ್ಯ ಕುಲಾಲ ಉಳ್ತೂರು, ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್ ಬಾರಿಕೆರೆ, ಕಾರಂತ ಪ್ರತಿಷ್ಠಾನದ್ ಕಾರ್ಯಧ್ಯಕ್ಷ ಆನಂದ ಸಿ.ಕುಂದರ್ ಮತ್ತಿತರರು ಇದ್ದರು.
ಸಮಾರೋಪ
ಕುಂದಾಪುರ ಕನ್ನಡ ಭಾಷೆಯಲ್ಲ ಬದುಕು ಸಂಸದ ಕೋಟ ಶ್ರೀನಿವಾಸ ಪೂಜಾರಿ
ಕೋಟ: ಕುಂದಾಪುರ ಕನ್ನಡ ಎಂಬ ಗ್ರಾಮೀಣ ಸೊಗಡಿನ ಕನ್ನಡ ಭಾಷೆ ಕೇವಲ ಭಾಷೆಯಾಗಿ ಉಳಿದಿಲ್ಲ, ಬದಲಾಗಿ ಕುಂದಾಪುರ ಕನ್ನಡ ಕರಾವಳಿ ಭಾಗದ ಜನರ ಬದುಕಾಗಿ ಜನ ಜೀವನದಲ್ಲಿ ಹಾಸು ಹೊಕ್ಕಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕೋಟ ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ಕುಂದಾಪುರ ಕನ್ನಡದ ಕಾಂಬ 5ನೇ ಸಮಾವೇಶದ ಸಮರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಕುಂದಾಪುರ ಕನ್ನಡ ಸಮಾವೇಶದ ಘನ ಅಧ್ಯಕ್ಷತೆ ವಹಿಸಿದ್ದ ಡಾ. ಅಣ್ಣಯ್ಯ ಕುಲಾಲ್ ದಂಪತಿಗಳಿಗೆ ಕುಂದಾಪುರ ಕನ್ನಡಿಗರ ಪರವಾಗಿ ಸನ್ಮಾನಿಸಿದ ಕೋಟ, ಮೊದಮೊದಲು ಕುಂದಾಪುರದ ಕನ್ನಡವನ್ನು
ಸಾರ್ವಜನಿಕವಾಗಿ ಮಾತನಾಡಲು ತಡಕಾಡುತ್ತಿದ್ದ ದಿನಗಳಿದ್ದವು. ಇಂದಿನ ದಿನಗಳಲ್ಲಿ ಕುಂದಾಪುರ ಕನ್ನಡಕ್ಕೆ ತನ್ನದೇ ಆದ ಗೌರವ, ಘನತೆಗಳು ಹೆಚ್ಚುತ್ತಿವೆ. ಆದ್ದರಿಂದ ಕುಂದಾಪುರ ಕನ್ನಡವನ್ನು ಹೆಮ್ಮೆಯಿಂದ ಹಂಚಿಕೊಳ್ಳೋಣ ಎಂದು ಕರೆಯಿತ್ತರು. ಸಭೆಯಲ್ಲಿ ಕಾರಂತ ಹುಟ್ಟೂರ ಪ್ರತಿಷ್ಟಾನದ ಗೌರವಾಧ್ಯಕ್ಷ ಆನಂದ್ ಸಿ. ಕುಂದರ್, ಕೋಟತಟ್ಟು ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ನರೇಂದ್ರ ಕುಮಾರ್ ಕೋಟ ಮುಂತಾದವರಿದ್ದರು.
ಕೋಟ ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ಕುಂದಾಪುರ ಕನ್ನಡದ ಕಾಂಬ 5ನೇ ಸಮಾವೇಶದ ಸಮರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಡಾ. ಅಣ್ಣಯ್ಯ ಕುಲಾಲ್ ದಂಪತಿಗಳಿಗೆ ಕುಂದಾಪುರ ಕನ್ನಡಿಗರ ಪರವಾಗಿ ಸನ್ಮಾನಿಸಲಾಯಿತು.

















Leave a Reply