Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಶಿಕ್ಷಕಿ ಗೀತಾ ಎ ಶೆಟ್ಟಿ ಆಯ್ಕೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ದಿನಾಂಕ 18,19, 20 ನೇ ಮೇ-2025 ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣ ದಲ್ಲಿ ಜರುಗಿತ್ತು.

ಈ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ  ವಡ್ಡರ್ಸೆಯ ಕನ್ನಡ ಭಾಷಾ ಶಿಕ್ಷಕಿ ಗೀತಾ ಆನಂದ ಶೆಟ್ಟಿ ಅವರು 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಚಿನ್ನದ ಪದಕ ವಿಜೇತರಾಗಿ  ಮೇಘಾಲಯದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಈವರೆಗೆ 13 ಬಾರಿ ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದು, ಹಲವಾರು ಬಹುಮಾನಗಳನ್ನು ಪಡೆದಿದ್ದು, 2025 ರ ಫೆಬ್ರವರಿಯಲ್ಲಿ ಚಂಡಿಗಡದಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ . ಈಗ ದ್ವಿತೀಯ ಬಾರಿಗೆ ಮೇಘಾಲಯದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ  ಭಾಗವಹಿಸಲಿದ್ದಾರೆ. ಇವರಿಗೆ ಕನ್ನಡ ಭಾಷಾ ಶಿಕ್ಷಕಿಯರು ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *