Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

SSLC ಮತ್ತು PUCಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ಮತ್ತು ಸ್ಕೌಟ್ ಗೈಡ್ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡಿರುವ  ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸುವ ಕಾರ್ಯಕ್ರಮ

ಸ್ಕೌಟ್/ ಗೈಡ್ ಒಂದು ಅಂತರಾಷ್ಟ್ರೀಯ ಸಂಸ್ಥೆ. ಪ್ರಸ್ತುತ ಉಡುಪಿ ಜಿಲ್ಲಾ ಸಂಸ್ಥೆಯಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲಾಧ್ಯಕ್ಷರಾಗಿರುತ್ತಾರೆ. ಶಾಂತ ಆಚಾರ್ಯರು ಜಿಲ್ಲಾ ಮುಖ್ಯ ಆಯುಕ್ತರಾಗಿ ಅನೇಕ ವರ್ಷಗಳ ಕಾಲ ಸಂಸ್ಥೆಯನ್ನು ಮುನ್ನಡೆಸಿದ್ದಲ್ಲದೆ ಪ್ರಸ್ತುತ ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ,  ಜಿಲ್ಲಾ ಸಂಸ್ಥೆ ಉಡುಪಿ ಜಿಲ್ಲಾ   ಮುಖ್ಯ ಆಯುಕ್ತರಾಗಿ  ಇಂದ್ರಾಳಿ ಜಯಕರ ಶೆಟ್ಟಿ  ಜಿಲ್ಲಾ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಸ್ಕೌಟ್ ಆಯುಕ್ತರಾಗಿ ಜನಾರ್ದನ್ ಕೊಡವೂರು, ಗೈಡ್ಸ್ ಆಯುಕ್ತರಾಗಿ ಜ್ಯೋತಿ ಪೈ ಯವರು ಕಾರ್ಯ ನಿರ್ವಹಿಸುತ್ತಿದ್ದಾರೆ. 

ರಾಜ್ಯ ಸಂಸ್ಥೆಯು ಅನೇಕ ಚಟುವಟಿಕೆಗಳನ್ನು ನಿರ್ವಹಿಸಲು ಜಿಲ್ಲೆಗೆ ವಹಿಸುತ್ತಿದ್ದು, ಪ್ರತಿ ವರ್ಷವೂ ಸ್ಕೌಟ್ ಗೈಡ್ ಚಟುವಟಿಕೆಗಳಲ್ಲಿ ರಾಜ್ಯಮಟ್ಟದಲ್ಲಿ ಎರಡನೇ ಸ್ಥಾನದಲ್ಲಿರುವ ಉಡುಪಿ ಜಿಲ್ಲೆಗೆ ಈ ಬಾರಿ ಎಸ್. ಎಸ್. ಎಲ್. ಸಿ . ಮತ್ತು ಪಿ.ಯು.ಸಿ.ಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ಮತ್ತು ಸ್ಕೌಟ್ ಗೈಡ್ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡಿರುವ  ಪ್ರತಿಭಾನ್ವಿತ ವಿದ್ಯಾರ್ಥಿ ಗಳನ್ನು ಗುರುತಿಸುವ ಗುರುತರ ಜವಾಬ್ದಾರಿ ನೀಡಿದೆ.

ದಿನಾಂಕ 30.05.2025, ಶುಕ್ರವಾರದಂದು ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀಕೃಷ್ಣ ಮಠದ ಆಶ್ರಯದಲ್ಲಿ, ಉಡುಪಿ ಜಿಲ್ಲಾ ಸಂಸ್ಥೆಯಾ ಆಯೋಜನೆ ಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 1200 ಪ್ರತಿಭಾನ್ವಿತ ವಿದ್ಯಾರ್ಥಿಗಳು ಭಾಗವಹಿ ಸುತ್ತಿದ್ದಾರೆ. ಬೆಳಿಗ್ಗೆ ಗಂಟೆ 10.00ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಳಿಕ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಮುಖ್ಯ  ಆಯುಕ್ತರಾದ  ಜಯಕರ ಶೆಟ್ಟಿ ಇಂದ್ರಾಳಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. 

ಈ ಸಮಾರಂಭದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಅನೇಕ ಇಲಾಖೆಗಳಲ್ಲಿ ಸಚಿವರಾಗಿ ಕೆಲಸ ಮಾಡಿರುವ ರಾಜ್ಯ ಮುಖ್ಯ ಆಯುಕ್ತರಾದ ಶ್ರೀ ಪಿ.ಜಿ. ಆರ್ ಸಿಂಧ್ಯಾ ರವರು ಸಭಾಧ್ಯಕ್ಷತೆ ವಹಿಸಲಿದ್ದಾರೆ.    ದಕ್ಶಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತರಾದ ಡಾ. ಮೋಹನ್ ಆಳ್ವ,   ಉಡುಪಿ ಚಿಕ್ಕಮಗಳೂರು ಸಂಸದರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ,  ರಾಜ್ಯದ ವಿಧಾನ ಸಭೆಯ ಸ್ಪೀಕರ್  ಶ್ರೀ ಯುಟಿ ಖಾದರ್, ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ, ಕಾಪು ಶಾಸಕರಾಗಿರುವ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ಶಾಸಕರಾಗಿರುವ ಶ್ರೀ ಸುನಿಲ್ ಕುಮಾರ್, ಕುಂದಾಪುರ ಶಾಸಕರಾಗಿರುವ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ, ಮಾಜಿ ಸಚಿವರಾಗಿರುವ ಶ್ರೀ ಪ್ರಮೋದ್ ಮಧ್ವರಾಜ್, ರಾಜ್ಯ ಸಂಘಟನಾ ಆಯೋಗದ ಶ್ರೀ ಪ್ರಭಾಕರ್ ಭಟ್, ಸಿ. ಮಂಜುಳಾ ಹಾಗೂ ಜಿಲ್ಲಾ ಸಂಸ್ಥೆಯ  ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. 

ಪತ್ರಿಕಾ ಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಆಯುಕ್ತರಾದ ಎಂ. ಪ್ರಭಾಕರ್  ಭಟ್, ಉಡುಪಿ ಜಿಲ್ಲಾ ಸ್ಕೌಟ್ ಆಯುಕ್ತ  ಜನಾರ್ದನ್ ಕೊಡವೂರು, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನಾ ಶೇಖರ್ (ಗೈಡ್ಸ್),  ಜಿಲ್ಲಾ ಕಾರ್ಯದರ್ಶಿ ಆನಂದ ಅಡಿಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *