Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

2 ನೆ ಬಾರಿಗೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಗಣಿ ಇಲಾಖೆಯ ಭ್ರಷ್ಟ ಅಧಿಕಾರಿ ಕೃಷ್ಣವೇಣಿ

ಮಂಗಳೂರು: ಕಟ್ಟಡ ಕಟ್ಟಲು ಜಮೀನಿನಲ್ಲಿರುವ ಕಟ್ಟಡಕಲ್ಲು ತೆಗೆಯಲು ಪ್ರಮಾಣಪತ್ರ/ದೃಢಿಕರಣ ಪತ್ರ ನೀಡಲು ಲಂಚ ಪಡೆಯುತ್ತಿದ್ದ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಮತ್ತು ಇಬ್ಬರು ಸಿಬ್ಬಂದಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ, ಸಿಬ್ಬಂದಿ ಪ್ರದೀಪ್ ಮತ್ತು ಚಾಲಕ ಮಧು ಬಂಧಿತ ಆರೋಪಿಗಳು.ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ ಒಂದೇ ವರ್ಷದಲ್ಲಿ 2 ನೆ ಭಾರಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಟ್ಟಡ ಕಟ್ಟಲು ಅನುಮತಿ ನೀಡಲು ಇಂದು ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿರವರು ಚಾಲಕ ಮಧುರವರ ಮೂಲಕ ರೂ 50,000 ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ.

ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ರವರು ಹಾಗೂ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣಿಯ ಪೊಲೀಸ್ ನಿರೀಕ್ಷಕರಾದ ಮಂಜುನಾಥ, ರಾಜೇಂದ್ರ ನಾಯ್ಕ ರವರು ಮಂಗಳೂರು ಮತ್ತು ಉಡುಪಿ ಲೋಕಾಯುಕ್ತ ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

Leave a Reply

Your email address will not be published. Required fields are marked *