Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕುಂದಾಪುರ: ಗಾಳಿಮಳೆಯಿಂದ ನೆರೆ; ಹಲವು ಮಂದಿ ಸ್ಥಳಾಂತರ

ಕುಂದಾಪುರ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿಮಳೆಯಿಂದಾಗಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಹಲವೆಡೆ ನೆರೆ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ

ರವಿವಾರ ಸುರಿದ ಭಾರಿ ಮಳೆಗೆ ಕುಬ್ಬಾ ನದಿ ಉಕ್ಕಿ ಹರಿಯುತ್ತಿದ್ದು ಪರಿಣಾಮ ನದಿ ನೀರು ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಲಾವೃತಗೊಂಡಿದೆ,

ಭಾರೀ ಮಳೆಯ ಪರಿಣಾಮ ನದಿ ಉಕ್ಕಿ ಹರಿದು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಒಳಾಂಗಣಕ್ಕೆ ನೀರು ನುಗ್ಗಿದೆ, ಜೊತೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವಸ್ತಗೊಂಡಿದೆ.

ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಸೌಪರ್ಣಿಕಾ ನದಿ ಪಾತ್ರದ ನಾವುಂದ ಗ್ರಾಮದ ಸಾಲ್ಬುಡ, ಅರೆಹೊಳೆ, ನಾಡ ಗ್ರಾಮದ ಚಿಕ್ಕಳ್ಳಿ, ಪಡುಕೋಣೆ ಸೇರಿದಂತೆ ಹಲವು ಭಾಗಗಳಲ್ಲಿ ನೆರೆ ಬಂದಿದ್ದು ಪರಿಣಾಮ ಮರವಂತೆ – ಪಡುಕೋಣೆ ರಸ್ತೆ ಜಲಾವೃತಗೊಂಡಿದೆ.

ಭಾರೀ ಮಳೆಯಿಂದಾಗಿ ಕಂಬದಕೋಣೆ ಗ್ರಾಮದ ಹಳಗೇರಿಯಲ್ಲಿ ಎಡಮಾವಿನಹೊಳೆ ಉಕ್ಕಿ ಹರಿಯುತ್ತಿದ್ದು ಸುತ್ತ ಮುತ್ತಲ ಪ್ರದೇಶಗಳು ಜಲಾವೃತಗೊಂಡು ಜನ ಜೀವನ ಅಸ್ತವ್ಯಸ್ತಗೊಂಡಿದೆ. ನೆರೆಯ ಪರಿಣಾಮ ಹಲವು ಮನೆಗಳು, ಗದ್ದೆಗಳು ಜಲಾವೃತಗೊಂಡಿದ್ದು ಸ್ಥಳಕ್ಕೆ ಶಾಸಕ ಗಂಟಿಹೊಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ,

Leave a Reply

Your email address will not be published. Required fields are marked *