
ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆ ಇಲ್ಲಿ ರಕ್ತದಾನಿ ಬಳಗ ಮರವಂತೆ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರೆಡ್ ಕ್ರಾಸ್ ಕುಂದಾಪುರ ಸಹಕಾರದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.
ರಕ್ತದ ಆಪತ್ಭಾಂದವ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣಿಪಾಲ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಇದೇ ವೇಳೆ ಕಳೆದ ಹಲವು ವರ್ಷಗಳಿಂದ ರಕ್ತದಾನಗೈಯುತ್ತಿರುವ ಅಭಯಹಸ್ತ ಉಡುಪಿ ಇದರ ಸದಸ್ಯರಾದ ಪ್ರಶಾಂತ್ ತಲ್ಲೂರು ಹಾಗೂ ದಿನೇಶ್ ಕಾಂಚನ್ ಬಾರಿಕೆರೆ ಅವರನ್ನು ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.
ರಕ್ತದಾನ ಶಿಬಿರದಲ್ಲಿ ಒಟ್ಟು 86 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಕಳೆದ 6 ವರ್ಷಗಳಿಂದ ಯಶಸ್ವಿ ರಕ್ತದಾನ ಶಿಬಿರವನ್ಮು ಆಯೋಜನೆ ಮಾಡುತ್ತಿರುವ ವಿಘ್ನೇಶ್ ಮರವಂತೆ ಇವರಿಗೆ ಸಭೆ ಕೃತಜ್ಞತೆ ಸಲ್ಲಿಸಿತು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆ ಇಲ್ಲಿ ರಕ್ತದಾನಿ ಬಳಗ ಮರವಂತೆ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ನ ಸದಸ್ಯರಾದ ಪ್ರಶಾಂತ್ ತಲ್ಲೂರು ಹಾಗೂ ದಿನೇಶ್ ಕಾಂಚನ್ ಬಾರಿಕೆರೆ ಇವರುಗಳನ್ನು ಸನ್ಮಾನಿಸಲಾಯಿತು. ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಅಧ್ಯಕ್ಷ ಸತೀಶ್ ಸಾಲ್ಯಾನ್ ಮತ್ತಿತರರು ಇದ್ದರು.
Leave a Reply