Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ನರ್ಮ್ ಬಸ್ಸು ಗಳ ಸೇವೆಯನ್ನು ಹೆಚ್ಚಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟಕ್ಕೆ ಮನವಿ

ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ  ಓಡಾಟದಿಂದ ಸಾವರ್ಜನಿಕರ ಪ್ರಶಂಸೆಗೂ ಪಾತ್ರವಾಗಿತ್ತು, ಆದರೆ ಪ್ರಸ್ತುತ ಆ 13 ಬಸ್ಸುಗಳ ಓಡಾಟವನ್ನು ಖಾಯಂ ಆಗಿ ಸ್ಥಗಿತಗೊಳಿಸಲಾಗಿರುತ್ತದೆ. ಸ್ಥಗಿತಗೊಳಿಸಲಾಗಿರುವ  13 ರೂಟ್ ಗಳ  ಬಸ್ಸುಗಳ ಓಡಾಟವನ್ನು ಪುನರಾರಂಭಿಸುವುದು ತೀರಾ ಅಗತ್ಯವಾಗಿರುತ್ತದೆ.

ಅಲ್ಲದೆ ಸದ್ರಿ 45 ಬಸ್ಸು ಗಳ ಮಂಜೂರಾತಿಯು 10 ವರ್ಷಗಳ ಹಿಂದಿನ ಸಮೀಕ್ಷೆಯಂತೆ ಆಗಿರುತ್ತದೆ, ಹೊಸ ಸಂಪರ್ಕ ರಸ್ತೆಗಳ ಅಭಿವೃದ್ಧಿ ಮತ್ತು ಪ್ರಸ್ತುತ ಪ್ರಯಾಣಿಕರ ಓಡಾಟದ ಸಂಖ್ಯೆಗೆ ಅನುಗುಣವಾಗಿ ಸದ್ರಿ ಬಸ್ಸುಗಳ ಸಂಖ್ಯೆಯನ್ನು ಕನಿಷ್ಠ 80 ನರ್ಮ್ ಬಸ್ಸುಗಳಿಗೆ ಹೆಚ್ಚಿಸಬೇಕೆಂದು ಆಗ್ರಹಿಸಲಾಗಿದೆ ,ಹಾಗೂ ನಗರದಲ್ಲಿ ಕಾರ್ಯಾನಿರ್ವಹಿಸುತ್ತಿರುವ  32 ನರ್ಮ್ ಬಸ್ಸುಗಳು ತೀರಾ ಹಳೆಯದಾಗಿದ್ದು, ಮಾರ್ಗ ಮಧ್ಯೆ ಕೆಟ್ಟು ನಿಲ್ಲುವ ಘಟನಗಳೇ ಸಂಭವಿಸುತ್ತಿದೆ ಹಾಗೂ ಬಸ್ಸುಗಳಿಗೆ ಚಾಲಕರು ಮತ್ತು ನಿರ್ವಾಹಕರ ಕೊರತೆ ಇದ್ದು ಹುದ್ದೆ ಭರ್ತಿ ಮಾಡಬೇಕಾದ ಅನಿವಾರ್ಯತೆ ಇದೆ. ಸಮರ್ಪಕವಾದ ಬಸ್ ಸಂಚಾರ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು, ಸಾರ್ವಜನಿಕರು ಮತ್ತು ಕಾರ್ಮಿಕರು, ವಯೋವೃದ್ಧರು ಕಾಲ್ನಡಿಗೆಯಲ್ಲಿ ಓಡಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ಉಡುಪಿ ನಗರ ಯುವಮೋರ್ಚಾ ಜಿಲ್ಲಾಧಿಕಾರಿಗಳಿಗೆ ಈ ಎಲ್ಲಾ ಸಮಸ್ಯೆಗಳನ್ನು ವಿವರಿಸಿ ಅತೀ ಶೀಘ್ರದಲ್ಲಿ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಲು ಆಗ್ರಹಿಸಿದ್ದು, ನರ್ಮ್ ಬಸ್ಸು ಗಳ ಸೇವೆಯನ್ನು ಹೆಚ್ಚಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗೃವಾದ ಹೋರಾಟ ಕೈಗೆತ್ತಿಕೊಳ್ಳುವ ನಿರ್ದಾರವನ್ನು ಮಾಡುವುದಾಗಿ ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ನಗರ ಯುವಮೋರ್ಚಾ ಅಧ್ಯಕ್ಷರಾದ ಶ್ರೀವತ್ಸ, ಉಪಾಧ್ಯಕ್ಷರಾದ ಸಂದರ್ಶ ಆಚಾರ್ಯ, ಪ್ರಜ್ವಲ್ ಪೂಜಾರಿ, ಧನುಷ್ ಬಿಕೆ, ಪ್ರಧಾನ ಕಾರ್ಯದರ್ಶಿಗಳಾದ ನಿತಿನ್ ಪೈ ಮಣಿಪಾಲ, ಶಿವಪ್ರಸಾದ್ ಕಾರ್ಯದರ್ಶಿಗಳಾದ ಧನುಷ್ ಕಡಿಯಾಳಿ, ಹರ್ಷರಾಜ್, ಆಕಾಂಶ್, ಭೂಷಣ್, ದೀಕ್ಷಿತ್ ಶೆಟ್ಟಿ, ರಮಿತ್ ಶೆಟ್ಟಿ, ತರುಣ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *