
ಕೋಟ: ಇಲ್ಲಿನ ಹಂಗಾರಕಟ್ಟೆ ಮಾಬುಕಳದ ಚೇತನಾ ಪ್ರೌಢಶಾಲೆ ಇಲ್ಲಿ ಪೋಷಕರ ಸಭೆ ಇತ್ತೀಚಿಗೆ ಜರಗಿತು.
ಈ ಕಾರ್ಯಕ್ರಮದಲ್ಲಿ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಘವೇಂದ್ರ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳುಹಾಗೂ ಸೈಬರ್ ಕ್ರೈಂ , ಮಕ್ಕಳ ಮೇಲಿನ ದೌರ್ಜನ್ಯಗಳು, ಫೋಕ್ಸೊ ಮುಂತಾದ ವಿಷಯಗಳ ಕುರಿತು ಮಾಹಿತಿಯನ್ನು ನೀಡಿದರು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಭರತ್ ಕುಮಾರ್ ಶೆಟ್ಟಿ ಮಗುವಿನ ಕಲಿಕೆಯಲ್ಲಿ ಪೋಷಕರ ಪಾತ್ರದ ಮಹತ್ವವನ್ನು ತಿಳಿಸಿದರು. ಶಾಲಾ ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ, ಪೋಷಕರಿಗೆ ಶೈಕ್ಷಣಿಕ ಮಾಹಿತಿಯನ್ನು ನೀಡಿದರು, ಶಾಲಾ ಸಹಶಿಕ್ಷಕ ಚಂದ್ರ ಕಾರ್ಯಕ್ರಮವನ್ನು ನಿರೂಪಿಸಿದರು. ಸಹಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಂಗಾರಕಟ್ಟೆ ಮಾಬುಕಳದ ಚೇತನಾ ಪ್ರೌಢಶಾಲೆ ಇಲ್ಲಿ ಪೋಷಕರ ಸಭೆಯಲ್ಲಿ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಘವೇಂದ್ರ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಭರತ್ ಕುಮಾರ್ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ ಉಪಸ್ಥಿತರಿದ್ದರು.
Leave a Reply