
ಬೆಂಗಳೂರು : ಗಾಣಿ ಮಠ ಅನುದಾನ ಬಿಡುಗಡೆಗೆ ಕಮಿಷನ್ ಕೇಳಿದ್ದಾರೆಂದು ಸಚಿವ ಶಿವರಾಜ್ ತಂಗಡಗಿ ವಿರುದ್ಧ ನೆಲಮಂಗಲದ ಶ್ರಿಕ್ಷೇತ್ರ ತೈಲೇಶ್ವರ ಗಾಣಿಗರ ಮಹಸಂಸ್ಥಾನ ಮಠದ ಪೂರ್ಣಾನಂದಪೂರಿ ಸ್ವಾಮೀಜಿಗಳು ಆರೋಪ ಮಾಡಿದ್ದು, ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರವಾಗಿ ಕಿಡಿಕಾರಿದೆ.
ಮಠದ ಜೀರ್ಣೋದ್ಧಾರಕ್ಕಾಗಿ 3.5 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಅನುದಾನ ಬಿಡುಗಡೆ ಮಾಡಲು ಸಚಿವ ಶಿವರಾಜ್ ತಂಗಡಗಿಯವರು 25 ಪರ್ಸೆಂಟ್ ಕಮಿಷನ್ ಕೇಳಿದ್ದಾರೆ ಎಂದು ಸ್ವಾಮೀಜಿ ಆರೋಪ ಮಾಡಿದ್ದಾರೆ. ಈ ಕುರಿತು ಖಾಸಗಿ ಸುದ್ದಿ ಸಂಸ್ಥೆಯೊಂದು ವರದಿ ಪ್ರಕಟಿಸಿದ್ದು, ವರದಿ ಬೆನ್ನಲ್ಲೇ ಜೆಡಿಎಸ್ ಸಚಿವರ ವಿರುದ್ಧ ತೀವ್ರವಾಗಿ ಕಿಡಿಕಾರಿದೆ.
ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರೇ ವಸೂಲಿ ಏಜೆಂಟ್’ಗಳಾಗಿದ್ದಾರೆ.
ಗಾಣಿಗ ಮಠದ ಅನುದಾನ ಬಿಡುಗಡೆಗೆ ಸಚಿವ ಶಿವರಾಜ್ ತಂಗಡಗಿ ಕಮಿಷನ್ ಕೇಳಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿ ಪೂರ್ಣಾನಂದ ಪುರಿ ಸ್ವಾಮೀಜಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಆದಿಯಾಗಿ ಮಂತ್ರಿಗಳು, ಕಾಂಗ್ರೆಸ್ ಶಾಸಕರು ಲಂಚ ಹೊಡೆಯುವುದರಲ್ಲೇ ನಿರತರಾಗಿದ್ದಾರೆ. ಇದು ಅಭಿವೃದ್ಧಿ ಶೂನ್ಯ ಶೇ.60 ಕಮಿಷನ್ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ಎಂದು ವಾಗ್ದಾಳಿ ನಡೆಸಿದೆ.
Leave a Reply