
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಚಿಟ್ಟಿಬೆಟ್ಟು ಎಂಟು ಕೊರಗ ಸಮುದಾಯದವರಿಗೆ ಹೊಸ ಮನೆ ನಿರ್ಮಾಣ ಕಾರ್ಯಕ್ಕೆ ಸಹಾಯಧನಕ್ಕೆ ಶಿಫಾರಸ್ಸು ಮಾಡುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ ಅವರು ಮನವಿ ಸಲ್ಲಿಸಿದರು.
ಈ ಬಗ್ಗೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತನಾಡಿ ಕೋಟತಟ್ಟು ಗ್ರಾ.ಪಂ. ಕೊರಗಸಮುದಾಯದ ಬಗೆಗಿನ ಕಾಳಜಿ, ಅವರಿಗೆ ಮೂಲ ಸಾಕರ್ಯ ಒದಗಿಸುವಲ್ಲಿ ಮುಖ್ಯ ಪಾತ್ರವಹಿಸುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಯವರಿಂದ ಸ್ಥಳ ಪರಿಶೀಲನೆ ಮಾಡಿ ಸೂಕ್ತ ಸಹಕಾರ ನೀಡುವ ಬಗ್ಗೆ ಭರವಸೆ ನೀಡಿದರು.
ಈ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು, ಪ್ರಸಾದ್ ರಾಜ್ ಕಾಂಚನ್ ಉಪಸ್ಥಿತರಿದ್ದರು. ಕೊರಗ ಸಮುದಾಯದವರಿಗೆ ಹೊಸ ಮನೆ ನಿರ್ಮಾಣಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್‌ರವರಿಗೆ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ ಅವರು ಮನವಿ ಸಲ್ಲಿಸಿದರು. ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು, ಪ್ರಸಾದ್‌ರಾಜ್ ಕಾಂಚನ್ ಉಪಸ್ಥಿತರಿದ್ದರು.
Leave a Reply