
ಕೋಟ: ಬಾಲ್ಯದ ಶಿಕ್ಷಣವನ್ನು ಸೇವಾಸಂಗಮ ಶಿಶುಮಂದಿರದಲ್ಲಿ ನೀಡಬೇಕು ಉತ್ಕöÈಷ್ಟ ಸಂಸ್ಕಾರಭರಿತ ಶಿಕ್ಷಣಕ್ಕೆ ಉತ್ತಮ ವಾತಾವರಣ ಕಲ್ಪಿಸಿದೆ ಎಂದು ಕೋಟದ ವಿವೇಕ ವಿದ್ಯಾಸಂಸ್ಥೆಯ ಉಪನ್ಯಾಸಕ ಡಾ.ಬಾಲಕೃಷ್ಣ ನಕ್ಷತ್ರಿ ಅಭಿಪ್ರಾಯಪಟ್ಟರು.
ಶನಿವಾರ ಕೋಟದ ಸೇವಾಸಂಗಮ ಶಿಶುಮoದಿರ ಇಲ್ಲಿ ಮುದ್ದು ಕೃಷ್ಣ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಧಾರ್ಮಿಕತೆಯನ್ನು ಪ್ರಾಥಮಿಕ ಹಂತದಲ್ಲಿ ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಆಗ ಮಾತ್ರ ಸುಸಂಸ್ಕೃತವಾಗಿ ಈ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯ ,ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಉಲ್ಲೇಖಿಸಿದಂತೆ ನಾವುಗಳು ಅದರ ಬಗ್ಗೆ ಅಧ್ಯಯ ನಡೆಸಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ಸೇವಾಸಂಗಮ ಶಿಶುಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಣೈ ಕೋಟ ವಹಿಸಿದ್ದರು.
ಮುದ್ದು ಕೃಷ್ಣ ಸ್ಪರ್ಧೆಯ ಆಶಯದ ನುಡಿಗಳನ್ನು ಸೇವಾಸಂಗಮ ಟ್ರಸ್ಟ್ ವಿಶ್ವಸ್ಥ ಮಂಡಳಿಯ ಕಾರ್ಯದರ್ಶಿ ಚಂದ್ರಿಕಾ ಧನ್ಯ ಗೈದರು. ಮುದ್ದುಕೃಷ್ಣ ಸ್ಪರ್ಧೆಯಲ್ಲಿ ಭಾಗವಹಿಸಿದ ಪುಟಾಣಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಮುಖ್ಯ ಅಭ್ಯಾಗತರಾಗಿ ಸಾಮಾಜಿಕ ಮುಖಂಡರಾ ಗೋಪಾಲಕೃಷ್ಣ ಮಯ್ಯ ಉಪಸ್ಥಿತರಿದ್ದರು. ಶಿಶುಮಂದಿರದ ವ್ಯವಸ್ಥಾಪಕಿ ಭಾಗ್ಯ ವಾದಿರಾಜ್ ಪ್ರಾಸ್ತಾವನೆ ಸಲ್ಲಿಸಿದರು.ಕಾರ್ಯದರ್ಶಿ ಸುಷ್ಮಾ ದಯಾನಂದ ಹೊಳ್ಳ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸಹಕಾರ್ಯದರ್ಶಿ ಕಲಾವತಿ ಅಶೋಕ್ ನಿರೂಪಿಸಿದರು. ಮಾಜಿ ಅಧ್ಯಕ್ಷೆ ನಾಗಲಕ್ಷ್ಮಿ ಹೆಗ್ಡೆ ವಂದಿಸಿದರು.
ಕೋಟದ ಸೇವಾಸಂಗಮ ಶಿಶುಮoದಿರ ಇಲ್ಲಿ ಮುದ್ದು ಕೃಷ್ಣ ಸ್ಪರ್ಧಾ ಕಾರ್ಯಕ್ರಮವನ್ನು ಕೋಟದ ವಿವೇಕ ವಿದ್ಯಾಸಂಸ್ಥೆಯ ಉಪನ್ಯಾಸಕ ಡಾ.ಬಾಲಕೃಷ್ಣ ನಕ್ಷತ್ರಿ ಉದ್ಘಾಟಿಸಿದರು. ಸೇವಾಸಂಗಮ ಶಿಶುಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಣೈ ಕೋಟ, ಸಾಮಾಜಿಕ ಮುಖಂಡರಾ ಗೋಪಾಲಕೃಷ್ಣ ಮಯ್ಯ ಉಪಸ್ಥಿತರಿದ್ದರು.
Leave a Reply