Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸ್ಕೌಟ್ಸ್ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ ಮತ್ತು ಧ್ಯಾನವನ್ನು ಸೇರ್ಪಡೆಗೊಳಿಸವ ಚಿಂತನೆ.~ ಪಿ ಜಿ ಆರ್ ಸಿಂದ್ಯಾ

ಉಡುಪಿ: ಸ್ಕೌಟ್ಸ್ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ ಮತ್ತು ಧ್ಯಾನವನ್ನು ಸೇರ್ಪಡೆಗೊಳಿಸವ ಚಿಂತನೆ ಇದೆ.  ಇದರಿಂದ ಮಕ್ಕಳ ಜ್ಞಾಪನಾ ಸಾಮರ್ಥ್ಯವೂ ವೃದ್ಧಿಸಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದರು.
ಬೋರ್ಡ್ ಹೈಸ್ಕೂಲಿನಲ್ಲಿ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಭಾರತ್ ಸೌಟ್ಸ್ ಮತ್ತು ಗೈಡ್ಸ್ ಸಂಯುಕ್ತಾಶ್ರಯದಲ್ಲಿ ಉಡುಪಿ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ, ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕ- ಮತ್ತು ಉಪನ್ಯಾಸಕಿಯರಿಗೆ  ರೋವರಿಂಗ್ ಮತ್ತು ರೇಂಜರಿಂಗ್ ಪ್ರಾರಂಭಿಕ ಶಿಬಿರ ಉದ್ಘಾಟಿಸಿ ಮಾತನಾಡಿದರು.

ರೋವರ್ಸ್ ಮತ್ತು ರೇಂಜರ್ಸ್ಗಳಿಗೆ ಶಿಸ್ತು ಮತ್ತು ಸಮಯಪ್ರಜ್ಞೆ ಬಹಳ ಮುಖ್ಯ. ಇಲ್ಲದಿದ್ದರೆ ದೇಶದ ಪ್ರಗತಿ ಸಾಧ್ಯವಿಲ್ಲ. ಕಮ್ಯುನಿಷ್ಟ್ ರಾಷ್ಟ್ರಗಳಲ್ಲಿ ಜನರು ಶಿಸ್ತು ಮತ್ತು ಸಮಯಪ್ರಜ್ಞೆ ಅಳವಡಿಸಿಕೊಂಡಿದ್ದರಿಂದ ಆರ್ಥಿಕವಾಗಿ ಪ್ರಬಲರಾಗಿದ್ದಾರೆ ಎಂದು ತಿಳಿಸಿದರು.  

ಜಿಲ್ಲೆಯ ಮಹಾನ್ ಮುತ್ಸದ್ದಿ ಡಾ. ವಿ.ಎಸ್. ಆಚಾರ್ಯ ಅವರು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಂಸ್ಥೆಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಉನ್ನತ ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಎಲ್ಲಾ ಕಾಲೇಜುಗಳಲ್ಲಿ  ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕಡ್ಡಾಯಗೊಳಿಸಿದ್ದರು ಎಂದು ಶ್ಲಾಘಿಸಿದರು.

ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಂಟನಾ ಆಯುಕ್ತ ಎಂ. ಪ್ರಭಾಕರ ಭಟ್,  ಡಿಡಿಪಿಯು ಮಾರುತಿ, ಪಪೂ ಪ್ರಾಂಶುಪಾಲರ ಸಂದ ಜಿಲ್ಲಾಧ್ಯಕ್ಷ ವರ್ಗೀಸ್ ಪಿ., ಜಿಲ್ಲಾ ಸ್ಕೌಟ್ಸ್ ಆಯುಕ್ತ ಜನಾರ್ದನ ಕೊಡವೂರು, ಗೈಡ್ಸ್ ಆಯುಕ್ತೆ ಜ್ಯೋತಿ ಪೈ,  ಖಜಾಂಚಿ ಹರಿಪ್ರಸಾದ್ ರೈ, ಶಿಬಿರ ನಾಯಕ ಗುರುಮೂರ್ತಿ,  ಜಿಲ್ಲಾ ಕಾರ್ಯದರ್ಶಿ ಆನಂದ್ ಅಡಿಗ, ರಾಜ್ಯ ಸಂಘಟನಾ ಸಹ ಕಾರ್ಯದರ್ಶಿ ಸುಮನ್ ಶೇಖರ್, ಕಾಲೇಜು ಪ್ರಾಂಶುಪಾಲೆ ಲೀಲಾವತಿ ಮೊದಲಾದವರು ಉಪಸ್ಥಿತರಿದ್ದರು. ಉದಯ ಭಾಸ್ಕರ್ ಶೆಟ್ಟಿ ನಿರೂಪಿಸಿದರು. ಹರೀಶ್ ಧನ್ಯವಾದವಿತ್ತರು.

Leave a Reply

Your email address will not be published. Required fields are marked *