Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸೆ.10ರಂದು ಪಾಂಡೇಶ್ವರ ಗ್ರಾಮ ಪಂಚಾಯತ್ ಗ್ರಾಮಸಭೆ

ಕೋಟ: ಇಲ್ಲಿನ ಪಾಂಡೇಶ್ವರ ಗ್ರಾಮಪಂಚಾಯತ್‌ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಸೆ. 10ರ ಬುಧವಾರ ಸಮಯ 10-30ಕ್ಕೆ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಈ ಸಭೆಯಲ್ಲಿ ಜನಪ್ರತಿಧಿಗಳು, ಗ್ರಾಮ ಮಟ್ಟದ ಇಲಾಖಾಧಿಕಾರಿಗಳು ಹಾಜರಿದ್ದು ವಿವಿಧ ಯೋಜನೆಗಳ ಮಾಹಿತಿ ನೀಡಿ ಮತ್ತು ಅರ್ಜಿಗಳನ್ನು ಸ್ವೀಕರಿಸಿ ಫಲಾನುಭವಿಗಳ ಆಯ್ಕೆಮಾಡಲಾಗುವುದು. ಈ ಗ್ರಾಮ ಸಭೆಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಭಾಗವಹಿಸಿ ಗ್ರಾಮದ ಅಭಿವೃದ್ಧಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಲು  ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *